ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು ಸಂಚಾರಿ ಕಾವೇರಿ ಯೋಜನೆ: ಡಿ.ಕೆ ಶಿವಕುಮಾರ್

ನೀರಿನ ಮಾಫಿಯಾ ತಡೆಯಲು ಈ ಯೋಜನೆ ಚಾಲನೆ ನೀಡಲಾಗಿದೆ. ಇದು ಸಣ್ಣ ಯೋಜನೆಯಲ್ಲ. ಕಳೆದ ವರ್ಷ ಬರಗಾಲದಲ್ಲಿ ನೀರಿನ ಅಭಾವ ಎದುರಾದಾಗ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿಭಾಯಿಸಲಾಯಿತು.
Newly launched water tankers by BWSSB in Bengaluru on Friday.
ಬೆಂಗಳೂರಿನಲ್ಲಿ ಬಿಡಬ್ಲ್ಯೂಎಸ್ಎಸ್ಬಿಯಿಂದ ಶುಕ್ರವಾರ ಹೊಸದಾಗಿ ನೀರಿನ ಟ್ಯಾಂಕರ್‌ಗಳನ್ನು ಬಿಡುಗಡೆ ಮಾಡಲಾಯಿತು.Photo | Express, Nagaraja Gadekal
Updated on

ಬೆಂಗಳೂರು: ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು.

ಸುಮಾರು 3 ಸಾವಿರ ಕೊಳವೆ ಬಾವಿ ಕೊರೆಸಿ, ಟ್ಯಾಂಕರ್ ಗಳನ್ನು ಇಟ್ಟುಕೊಂಡು 3 ಸಾವಿರ ರೂಪಾಯಿವರೆಗೂ ಹಣ ವಸೂಲಿ ಮಾಡುವ ಪ್ರವೃತ್ತಿ ಹೊಂದಿದ್ದಾರೆ. ಇಂದು ಈ ಯೋಜನೆ ಮೂಲಕ 4 ಸಾವಿರ ಲೀಟರ್ ನೀರಿಗೆ 660 ರೂ. ಹಾಗೂ 6 ಸಾವಿರ ಲೀಟರ್ ನೀರಿಗೆ 740 ರೂ. ದರ ನಿಗದಿ ಮಾಡಲಾಗಿದೆ. ಇದು ಕೊಳವೆ ಬಾವಿ ನೀರಲ್ಲ. ಇದು ಬಿಡಬ್ಲ್ಯೂಎಸ್ಎಸ್ ಬಿ ವತಿಯಿಂದ ನೀಡುತ್ತಿರುವ ಶುದ್ಧ ಕುಡಿಯುವ ನೀರು ಎಂದು ತಿಳಿಸಿದರು.

ನೀರಿನ ಮಾಫಿಯಾ ತಡೆಯಲು ಈ ಯೋಜನೆ ಚಾಲನೆ ನೀಡಲಾಗಿದೆ. ಇದು ಸಣ್ಣ ಯೋಜನೆಯಲ್ಲ. ಕಳೆದ ವರ್ಷ ಬರಗಾಲದಲ್ಲಿ ನೀರಿನ ಅಭಾವ ಎದುರಾದಾಗ ಪರಿಸ್ಥಿತಿಯನ್ನು ಅತ್ಯುತ್ತಮವಾಗಿ ನಿಭಾಯಿಸಲಾಯಿತು. ಕೆರೆಗಳನ್ನು ತುಂಬಿಸಿ, ಅಂತರ್ಜಲ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದೇವೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ಕೆರೆಗಳ ಅಭಿವೃದ್ಧಿ ಸಭೆ ಮಾಡಲಾಗಿದೆ. ಸಣ್ಣ ಮನೆಗಳಿಗೆ ನೀರಿನ ಸಂಪರ್ಕ ನೀಡಲು ಕೇವಲ 1 ಸಾವಿರ ಶುಲ್ಕ ಪಡೆಯಲು ತೀರ್ಮಾನಿಸಿದ್ದೇವೆ. ಅಪಾರ್ಟ್ಮೆಂಟ್ ನವರಿಗೆ ಆರಂಭದಲ್ಲಿ 20% ಹಣ ಪಡೆದು ನಂತರ ಒಂದು ವರ್ಷ ಕಾಲಾವಕಾಶ ನೀಡಲು ಮುಂದಾಗಿದ್ದೇವೆ. ಹೀಗೆ ಹೊಸ ನೀತಿಗಳ ಮೂಲಕ ಎಲ್ಲವನ್ನು ಒಂದು ವ್ಯವಸ್ಥೆಯಲ್ಲಿ ತರುವ ಪ್ರಯತ್ನ ಮಾಡಲಾಗುತ್ತಿದೆಎಂದು ತಿಳಿಸಿದರು.

Newly launched water tankers by BWSSB in Bengaluru on Friday.
ಚನ್ನಪಟ್ಟಣಕ್ಕೆ ನನ್ನ ಇಲಾಖೆಯಿಂದಲೇ 158 ಕೋಟಿ ರೂ ಅನುದಾನ, ಅಗತ್ಯ ಬಿದ್ದರೆ ಮತ್ತಷ್ಟು ನೀಡುತ್ತೇನೆ: ಡಿ.ಕೆ ಶಿವಕುಮಾರ್

ಬೆಂಗಳೂರಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕೆಲಸಗಳ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಸರ್ವರಿಗೂ ಸರಳ ಕಾವೇರಿ, ಮನೆ ಬಾಗಿಲಿಗೆ ಸಂಚಾರಿ ಕಾವೇರಿ ಯೋಜನೆಗಳನ್ನು ಪ್ರಾರಂಭಿಸಿದ್ದು, ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಂತಹ ಯೋಜನೆ ಜಾರಿಗೆ ತರಲಾಗಿದೆ. ನಿನ್ನೆ ನೆಲಮಂಗಲದಲ್ಲಿ ರೂ.1,900 ಕೋಟಿ ವೆಚ್ಚದಲ್ಲಿ ವೃಷಭಾವತಿ ನೀರನ್ನು ಸಂಸ್ಕರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದೆ. ಪ್ರತಿ ನೀರಿನ ಹನಿಯು ಮಹತ್ವದ್ದಾಗಿದೆ. ಅನೇಕರು ಇದನ್ನು ಟೀಕೆ ಮಾಡಬಹುದು. ಆದರೆ ಇಂತಹ ಯೋಜನೆ ಇದೇ ಮೊದಲಲ್ಲ. ದೆಹಲಿಯಲ್ಲೂ ಯಮುನಾ ನದಿ ನೀರನ್ನು ಗಿಡ ಬೆಳೆಸಲು, ವಾಹನ ತೊಳೆಯಲು ಹಾಗೂ ಕೈಗಾರಿಕೆಗೆ ಪೂರೈಸುತ್ತಾರೆ” ಎಂದರು.

“ನಾನು ಹಾಗೂ ಶಾಸಕರು ಈ ನೀರನ್ನು ಕುಡಿಯುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದ್ದೇವೆ. ಇನ್ನು ಶುದ್ಧ ಕುಡಿಯುವ ನೀರಿನ ಘಟಕವನ್ನು ಮೊದಲು ಆರಂಭಿಸಿದ್ದು, ನಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ. ಸುಮಾರು 300ಕ್ಕೂ ಹೆಚ್ಚು ಘಟಕ ಪ್ರಾರಂಭಿಸಿದ್ದೆ. ನಾನು ಬಹಳ ಇಚ್ಛಾಶಕ್ತಿಯಿಂದ ಬೆಂಗಳೂರು ನಗರದ ಜವಾಬ್ದಾರಿ ವಹಿಸಿದ್ದೇನೆ. ಇದು ಬಹಳ ಕಷ್ಟದ ಕೆಲಸ ಎಂದು ಗೊತ್ತಿದೆ. ಆದರೂ ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಮನಸ್ಸಿದ್ದಲ್ಲಿ ಮಾರ್ಗ, ಭಕ್ತಿ ಇದ್ದಲ್ಲಿ ದೇವರು ಎಂದು ನಂಬಿ ಕೆಲಸ ಮಾಡುತ್ತಿದ್ದೇನೆ” ಎಂದರು.

“ನಾನು ಜವಾಬ್ದಾರಿ ತೆಗೆದುಕೊಂಡು ಬಿಡಬ್ಲ್ಯೂಎಸ್ಎಸ್ ಬಿ ಸಭೆ ನಡೆಸಿದಾಗಲೇ ಇಲ್ಲಿನ ಆರ್ಥಿಕ ಪರಿಸ್ಥಿತಿ ಅರಿವಾಯಿತು. 2014ರ ಬಳಿಕ ನೀರಿನ ದರ ಏರಿಕೆ ಮಾಡು ಯಾರೂ ಧೈರ್ಯ ಮಾಡಿರಲಿಲ್ಲ. ನಾನು ಕೇವಲ ಸಿಎಂ ಅವರಿಗೆ ವಿಚಾರ ತಿಳಿಸಿ, ತೀರ್ಮಾನ ಮಾಡಿದೆ. ನಂತರ ಟೀಕೆ ಮಾಡುವವರು, ಧಿಕ್ಕಾರ ಕೂಗುವವರು ನನ್ನ ವಿರುದ್ಧ ಮಾಡಲಿ, ನೀವು ದರ ಏರಿಕೆ ಮಾಡಿ ಎಂದು ಮಂಡಳಿಗೆ ಸೂಚಿಸಿದೆ. ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತಿರುವಾಗ ನೀರಿನ ದರ ಮಾತ್ರ ಏರಿಕೆಯಾಗಿಲ್ಲ. ನಿಮ್ಮ ಮಂಡಳಿಯೂ ನಡೆಯಬೇಕಲ್ಲವೇ ಎಂದು ದರ ಏರಿಕೆ ಮಾಡಲಾಗಿದೆ” ಎಂದು ಹೇಳಿದರು.

“ಕಾವೇರಿ ನೀರಿನಲ್ಲಿ ಬಾಕಿ ಉಳಿದಿದ್ದ 6 ಟಿಎಂಸಿ ನೀರನ್ನು ಬಿಡಬ್ಲ್ಯೂಎಸ್ಎಸ್ ಬಿ ಪೂರೈಕೆಗೆ ನಾನು ಆದೇಶ ಹೊರಡಿಸಿದೆ. ಮುಂದೆ ಕಾವೇರಿ ಆರನೇ ಹಂತ ಯೋಜನೆಗೆ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ದರ ಏರಿಕೆ ನಂತರ ಈಗ ವಿವಿಧ ಬ್ಯಾಂಕುಗಳು ಸಾಲ ನೀಡಲು ಮುಂದೆ ಬರುತ್ತಿವೆ. ಇದರ ಜತೆಗೆ ಒಳಚರಂಡಿ ವ್ಯವಸ್ಥೆಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದೀರಿ. ನಾನು ಕೃಷ್ಣಾ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ನನ್ನನ್ನು ವಿದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಿದ್ದರು. ಈ ಮಂಡಳಿಯಲ್ಲಿ ರಾಜಕೀಯದವರನ್ನು ಮುಖ್ಯಸ್ಥರನ್ನಾಗಿ ಮಾಡುವ ಅವಕಾಶವಿತ್ತು. ಅದಕ್ಕೆ ಅಂತ್ಯವಾಡಿ ರಾಜಕಾರಣಿಗಳಿಗೆ ಅದರಲ್ಲಿ ಅವಕಾಶ ನೀಡಬಾರದು, ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಇದನ್ನು ನಿಭಾಯಿಸಲು ತೀರ್ಮಾನಿಸಲಾಯಿತು” ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com