
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯ ಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಪಟ್ಟಣ ರಸ್ತೆಯ ಬಳಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಹೆಬ್ಬಾಳದ ನಿವಾಸಿ ಮೋಹನ್ (21) ಎಂದು ಗುರ್ತಿಸಲಾಗಿದೆ. ಮಂಜುನಾಥ, ಚಾಲಕ ಪುನೀತ್, ಸಂಗಮೇಶ ಮತ್ತು ಮನೋಹರ್ ಗಾಯಾಳುಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಬ್ಬಾಳಿ ನಲ್ಲಿ ಶನಿವಾರ ಹುಟ್ಟುಹಬ್ಬ ಆಚರಿಸಿಕೊಂಡು ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಭಾನುವಾರ ಬೆಳಗ್ಗೆ 7 ಗಂಟೆಗೆ ತಾಲೂಕಿನ ಕನ್ನಿದೊಡ್ಡಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ.
ಅಪಘಾತದ ರಭಸಕ್ಕೆ ಚಾಲಕ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
Advertisement