
ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮಹಿಳೆ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಎಂದು ಗುರುತಿಸಲಾಗಿದೆ. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದೆ.
ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
Advertisement