ಅಂಗನವಾಡಿ ಆರಂಭವಾಗಿ 50 ವರ್ಷ: ಅಕ್ಟೋಬರ್ ನಲ್ಲಿ ಸುವರ್ಣ ಮಹೋತ್ಸವ ಆಚರಿಸಲು ನಿರ್ಧಾರ

ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಿದ್ದೇವೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು.
Laxmi Hebbalkar
ಲಕ್ಷ್ಮಿ ಹೆಬ್ಬಾಳ್ಕರ್
Updated on

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು ಅಕ್ಟೋಬರ್‌ಗೆ 50 ವರ್ಷಗಳು ತುಂಬಲಿವೆ. ಈ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ವಿಕಾಸ ಯೋಜನೆ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಿದ್ದೇವೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಈ ಸಂಬಂಧ "ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇವೆ.

ಒಂದು ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಇತರರು ಈ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಅವರು ಹೇಳಿದರು. ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ (ಐಸಿಡಿಎಸ್) ಸಭೆಯನ್ನು ಪರಿಶೀಲಿಸಿದ ಹೆಬ್ಬಾಳ್ಕರ್, ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಒತ್ತಿ ಹೇಳಿದರು.

Laxmi Hebbalkar
ಅಂಗನವಾಡಿ ಮಕ್ಕಳಿಗೆ ಪೌಷ್ಟಿಕಾಂಶ: Ragi health mix ನೀಡಲು ಸರ್ಕಾರ ಚಿಂತನೆ

ನಾವು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸಬೇಕಾಗಿದೆ" ಎಂದರು. ಈ ತರಗತಿಗಳು ಪ್ರಾರಂಭವಾಗುವಂತೆ ನೋಡಿಕೊಳ್ಳಲು ಅವರು ಉಪ ನಿರ್ದೇಶಕರು ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಐಸಿಡಿಎಸ್ ಅಡಿಯಲ್ಲಿ ಪೋಶನ್ ಟ್ರ್ಯಾಕರ್ ಸೂಚಕಗಳು, ಅನುದಾನ ಬಳಕೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ, ಕಾರ್ಯಕರ್ತರು ಮತ್ತು ಸಹಾಯಕರ ನೇಮಕಾತಿ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳ ವಿತರಣೆಯಂತಹ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com