
ಚಾಮರಾಜನಗರ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರ ಹಿರಿಯ ಪುತ್ರ ಚಾಮರಾಜ್ ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜ್ ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಹಲವು ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೇ ಪಿ. ಚಾಮರಾಜ್ ಅಸುನೀಗಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ವೆಂಕಟಮ್ಮ ದಂಪತಿಯ ಹಿರಿ ಪುತ್ರನಾಗಿರುವ ಚಾಮರಾಜ್ ಓರ್ವ ಸಹೋದರ, ಇಬ್ಬರು ಸಹೋದರಿಯರು, ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸ್ವಗ್ರಾಮ ಉಪ್ಪಿನಮೋಳೆಗೆ ಪಾರ್ಥೀವ ಶರೀರ ತರಲಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Advertisement