ಮಸೀದಿಯಲ್ಲಿದ್ದ Quran ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು: ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ ನಿರ್ಮಾಣ

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ.
ಪ್ರತಿಭಟನೆ.
ಪ್ರತಿಭಟನೆ.
Updated on

ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ.

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ.

ಈ ಮಸೀದಿಯಲ್ಲಿ ಎಂದಿನಂತೆ ಸೋಮವಾರ ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು ಗಮನಿಸಿದ್ದಾರೆ. ಹೀಗಾಗಿ ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಕುರಾನ್ ಮತ್ತು ಹದೀಸ್ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ.

ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಲ್ಲಡೆ ಸುದ್ದಿ ಹರಡುತ್ತಿದ್ದಂತೆ ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಮುಖಂಡರು, ಯುವಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದಂತೆಯೇ ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್ ಮತ್ತು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣ ತಪ್ಪದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದರು.

ಪ್ರತಿಭಟನೆ.
ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ

ಇದೀಗ ಎರಡು ದಿನಗಳಲ್ಲಿ ಅಪರಾಧಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಯುವಕರು ಪೊಲೀಸ್ ಅಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು. ಈ ಕೂಡ ಇಂತಹದ್ದೇ ಘಟನೆ ನಡೆದಿತ್ತು. ಆದರೆ, ಯಾವುದೇ ಬಂಧನವಾಗಿಲ್ಲ ಎಂದು ಕಿಡಿಕಾರಿದರು.

ಪ್ರತಿಭಟನಾ ನಿರತ ಯುವಕರು ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಬಯಸಿದ್ದರು. ಆದರೆ, ಪೊಲೀಸರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆವರಣದ ಬಳಿ ಮೆರವಣಿಗೆ ನಡೆಸುವಂತೆ ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ವಿಟಿಯು ಬಳಿ ಬೆಳಗಾವಿ-ಗೋವಾ ರಸ್ತೆಯನ್ನು ತಡೆಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಕೆಲವೇ ನಿಮಿಷಗಳಲ್ಲಿ ನೂರಾರು ಜನರು ಜಮಾಯಿಸಿ ಶಾಂತಿ ಬಸ್ತವಾಡದಿಂದ ರಾಣಿ ಚೆನ್ನಮ್ಮ ವೃತ್ತಕ್ಕೆ 8 ಕಿ.ಮೀ ದೂರದಲ್ಲಿ "ಭಾರತ್ ಮಾತಾ ಕಿ ಜೈ" ಎಂಬ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.

ಬಳಿಕ ಚೆನ್ನಮ್ಮ ವೃತ್ತದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ನಂತರ ಮುನ್ನೆಚ್ಚರಿಕೆಯಾಗಿ ವೃತ್ತಕ್ಕೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲಾಯಿತು. ಸುಮಾರು ಒಂದು ಗಂಟೆ ನಡೆದ ಪ್ರತಿಭಟನೆಯಿಂದಾಗಿ ಹಲವಾರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಎದುರಾಯಿತು.

ಎರಡು ತಿಂಗಳ ಹಿಂದೆ, ಫೆಬ್ರವರಿ 22 ರಂದು ಹಿಂದೂ ಯುವತಿಯೊಬ್ಬು ಮುಸ್ಲಿಂ ಯುವಕನೊಂದಿಗೆ ಓಡಿಹೋದ ನಂತರ ಶಾಂತಿ ಬಸ್ತವಾಡದಲ್ಲಿ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿತ್ತು. ಹುಡುಗಿಯ ತಾಯಿ ಅಪಹರಣ ಪ್ರಕರಣ ದಾಖಲಿಸಿದ್ದರು, ಆದರೆ, ನಂತರ ಹುಡುಗಿ ಸ್ವಇಚ್ಛೆಯಿಂದ ಓಡಿಹೋಗಿದ್ದಾಳೆಂಬುದು ಖಚಿತವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com