ದಿನೇಶ್ ಗುಂಡು ರಾವ್
ದಿನೇಶ್ ಗುಂಡು ರಾವ್

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
Published on

ಬೆಂಗಳೂರು: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ಜಿಲ್ಲಾಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡು ರಾವ್ ಸೋಮವಾರ ಸೂಚನೆ ನೀಡಿದರು.

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ಜಿಲ್ಲಾಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರಗಳನ್ನು ಪ್ರಾರಂಭಿಸಬೇಕು.

ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸಲು ಮತ್ತು ‌ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು ಎಂದು ಸೂಚಿಸಿದರು.

ಜೀವಸಾರ್ಥಕತೆ ಸೊಸೈಟಿಯ ನೋಂದಣಿಯನ್ನು ನವೀಕರಿಸುವುದು ಮತ್ತು ಕಾರ್ಯಾಚರಣಾ ವಲಯಗಳ ಸಂಖ್ಯೆಯನ್ನು ಐದರಿಂದ ಏಳಕ್ಕೆ ವಿಸ್ತರಿಸುವಂತೆ ಹಾಗೂ ಸ್ಟೀರಿಂಗ್ ಸಮಿತಿ ರಚಿಸುವುದರ ಜೊತೆಗೆ ಅಂಗಾಂಗ ವಿತರಣೆಯನ್ನು ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಪರಿಷ್ಕರಿಸುವ ಬಗ್ಗೆ ಚರ್ಚೆ ನಡಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com