ಮಾಜಿ ಸಚಿವ ಗೋಪಾಲಯ್ಯ ವಿರುದ್ಧದ ಅಬಕಾರಿ ಪ್ರಕರಣ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತರಾಟೆ, ಮರು ತನಿಖೆಗೆ ಆದೇಶ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಅವಧಿಯಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಕಾಕಂಬಿಯನ್ನು ನಿಯಮಬಾಹಿರವಾಗಿ ರಫ್ತು ಮಾಡಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.
Gopalaiah,
ಗೋಪಾಲಯ್ಯ
Updated on

ಬೆಂಗಳೂರು: ಮಾಜಿ ಅಬಕಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಇತರ ಅಧಿಕಾರಿಗಳು ಒಳಗೊಂಡ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಮುಕ್ತಾಯ ವರದಿಯನ್ನು ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ರದ್ದುಗೊಳಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಅವಧಿಯಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಕಾಕಂಬಿಯನ್ನು ನಿಯಮಬಾಹಿರವಾಗಿ ರಫ್ತು ಮಾಡಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. 2021 ರಿಂದ 2023 ರವರೆಗೆ ಕೆಎನ್ ರಿಸೋರ್ಸಸ್ ಪ್ರೈವೇಟ್ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್ ಟನ್ ಕಾಕಂಬಿ ರಫ್ತು ಮಾಡಲು ಅನುಮತಿ ನೀಡುವಾಗ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ವರದಿಯನ್ನು ಬದಿಗೆ ಸರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರು ಈ ಪ್ರಕರಣವನ್ನು ಕಾನೂನುಬದ್ಧವಾಗಿ ತನಿಖೆ ನಡೆಸಿ 3 ತಿಂಗಳ ಒಳಗೇ ವರದಿ ಸಲ್ಲಿಸಬೇಕು ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಈ ಪ್ರಕರಣದ ಕುರಿತು ಕರ್ನಾಟಕ ಲೋಕಾಯುಕ್ತ ಪೊಲೀಸರು ನಡೆಸಿರುವ ತನಿಖೆಯು ಕಾನೂನಿಗೆ ಅನುಗುಣವಾಗಿಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಇದಲ್ಲದೆ, ಯಾವುದೇ ಅಪರಾಧ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖಾ ಸಂಸ್ಥೆಯು ಪ್ರಕರಣದಲ್ಲಿ ಲಭ್ಯವಿರುವ ಸುಳಿವುಗಳನ್ನು ಸೇರಿಸಬೇಕಾಗಿತ್ತು. ಆದರೆ ಇದಾವುದನ್ನೂ ಈ ಪ್ರಕರಣದ ತನಿಖೆಯಲ್ಲಿ ಮಾಡಿಲ್ಲ ಎಂದು ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿರುವುದು ಲೋಕಾಯುಕ್ತ ಪೊಲೀಸರ ತನಿಖೆಯ ವಿಶ್ವಾಸರ್ಹತೆಯ ಬಗೆಗೆ ಹಲವು ಪ್ರಶ್ನೆಗಳು ಮತ್ತು ಅನುಮಾನಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

Gopalaiah,
ಬಿಜೆಪಿ ಮುಖಂಡ ಡಿ.ಎಸ್ ವೀರಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ, ತನಿಖಾ ಸಂಸ್ಥೆಯು ಈ ಪ್ರಕರಣವನ್ನು ಸರಿಯಾದ ದೃಷ್ಟಿಕೋನದಿಂದ ಗಮನಿಸದೇ ಇರುವುದನ್ನೂ ಸಹ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಅವಲೋಕಿಸಿದೆ. ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಐ ಎಸ್‌ ಎನ್ ಪ್ರಸಾದ್‌, ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಏಕರೂಪ್‌ ಕೌರ್‍‌, ಅಬಕಾರಿ ಇಲಾಖೆ ಆಯುಕ್ತ ಡಾ ಜೆ ರವಿಶಂಕರ್‍‌, ಇಲಾಖೆಯ ಅಧೀನ ಕಾರ್ಯದರ್ಶಿಯಾಗಿದ್ದ ಮಂಜುಳ ನಟರಾಜ್‌ ಅವರನ್ನೂ ಲೋಕಾಯುಕ್ತ ಪೊಲೀಸರು ತನಿಖೆಗೆ ಒಳಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಸರ್ಕಾರಿ ಖಜಾನೆಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂದು ಮುಕ್ತಾಯ ವರದಿಯಲ್ಲಿ ಸೂಚಿಸಲಾಗಿದೆ. ‘ಆದಾಗ್ಯೂ, ಈ ಅಂಶಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ಪ್ರತಿ ಮೆಟ್ರಿಕ್ ಟನ್‌ ರಫ್ತಿಗೆ 458 ರು.ಗಳನ್ನು ಪಾವತಿಸಬೇಕಾಗಿತ್ತು ಮತ್ತು ದೂರುದಾರರು ಲೆಕ್ಕಹಾಕಿದ ಅಂದಾಜು ನಷ್ಟ ಒಂಬತ್ತು ಕೋಟಿ ಹದಿನಾರು ಲಕ್ಷ ಎಂದು ಗಮನಿಸಲಾಗಿದೆ. ಪರವಾನಗಿದಾರರು ರಾಜ್ಯ ಸರ್ಕಾರ ಅಥವಾ ಅಬಕಾರಿ ಆಯುಕ್ತರು ಹೊರಡಿಸಬಹುದಾದ ಆದೇಶಗಳಿಗೆ ಬದ್ಧರಾಗಿದ್ದರು ಎಂಬುದನ್ನು ಸಹ ಗಮನಿಸುವುದು ಪ್ರಸ್ತುತವಾಗಿದೆ. ಆದಾಗ್ಯೂ, ಮೂಲಭೂತ ತತ್ವಗಳನ್ನು ಪಾಲಿಸದೆಯೇ ಆಕ್ಷೇಪಾರ್ಹ ಕೃತ್ಯವನ್ನು ಎಸಗಲಾಗಿದೆ,’ ಎಂದು ನ್ಯಾಯಾಲಯವು ತೀರ್ಪಿನಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಸಂಪೂರ್ಣ ದಾಖಲೆಗಳನ್ನು ಲಭ್ಯವಿರುವ ಸಾಮಗ್ರಿಗಳನ್ನು ಪರಿಶೀಲಿಸುವ ಮೂಲಕ, ಕರ್ನಾಟಕ ಲೋಕಾಯುಕ್ತ ನಡೆಸಿದ ತನಿಖೆ ಕಾನೂನಿಗೆ ಅನುಗುಣವಾಗಿಲ್ಲ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಹೇಳಿದರು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಉಪಾಧ್ಯಕ್ಷ ಮಂಜುನಾಥ ಎಸ್ ಸಲ್ಲಿಸಿದ ಖಾಸಗಿ ದೂರಿನ ತನಿಖೆಗೆ ನ್ಯಾಯಾಲಯ ಆದೇಶಿಸಿತು. ಲೋಕಾಯುಕ್ತ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ನಂತರ ಅಕ್ಟೋಬರ್ 12, 2023 ರಂದು ಮುಕ್ತಾಯ ವರದಿಯನ್ನು ಸಲ್ಲಿಸಿದರು. ಆದರೆ ಮಂಜುನಾಥ್ ಅವರು ಅದು ಕಳಪೆ ಮತ್ತು ಸ್ಪಷ್ಟತೆಯ ಕೊರತೆಯಿದೆ ಎಂದು ವಾದಿಸಿ ಅದನ್ನು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com