ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌: ಕಟ್ಟಡ, ನಿವೇಶನಗಳಿಗೆ ಎ ಮತ್ತು ಬಿ-ಖಾತಾ ನೀಡುವ ಅವಧಿ 3 ತಿಂಗಳು ವಿಸ್ತರಣೆ

ರಾಜ್ಯದ ವಿವಿಧ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ–ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ.
byrathi Suresh
ಸಚಿವ ಬೈರತಿ ಸುರೇಶ್‌
Updated on

ಬೆಂಗಳೂರು/ ತುಮಕೂರು: ನಗರ ಪ್ರದೇಶಗಳಲ್ಲಿನ ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ವಿತರಿಸಲು ಮೇ 10 ರ ಗಡುವು ಮುಕ್ತಾಯಗೊಳ್ಳುತ್ತಿದ್ದು, ಶೇಕಡಾ 50 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸದ ಕಾರಣ, ಸರ್ಕಾರವು ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಿದೆ.

ಫೆಬ್ರವರಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಬಿ-ಖಾತಾ ವಿತರಿಸಲು ಮತ್ತು ಅವುಗಳನ್ನು ಆಸ್ತಿ ತೆರಿಗೆ ಅಡಿಯಲ್ಲಿ ತರಲು ಮೂರು ತಿಂಗಳ ಗಡುವನ್ನು ನಿಗದಿಪಡಿಸಿದ್ದರು. ಈ ಕ್ರಮದಿಂದ ಸರ್ಕಾರಕ್ಕೆ ಸುಮಾರು 3,500 ಕೋಟಿ ರೂ. ಆದಾಯವನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ರಾಜ್ಯದ ವಿವಿಧ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ–ಖಾತಾ ನೀಡುವ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌.ಸುರೇಶ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಯಾವುದೇ ಪರವಾನಗಿ ಇಲ್ಲದೇ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ನಿರ್ಮಿಸಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಬಿ–ಖಾತಾ ನೀಡಿ ಸಕ್ರಮಗೊಳಿಸಲು ನಿರ್ಣಯಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

byrathi Suresh
ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ನಾಗರಿಕರಿಗೆ ಒಂದು ಬಾರಿಯ ಅವಕಾಶವನ್ನು ಮೇ 10 ರವರೆಗೆ ನೀಡಲಾಗಿತ್ತು. ವಿವಿಧ ಮಹಾನಗರ ಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು, ಮನೆಗಳು, ನಿವೇಶನಗಳಿವೆ. ಈವರೆಗೆ ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ–ಖಾತಾ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ–ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ–ಖಾತಾ ವಿತರಿಸಲಾಗುವುದು ಎಂದಿದ್ದಾರೆ.

ನಿವೇಶನ ಅಥವಾ ಕಟ್ಟಡಗಳನ್ನು ಖರೀದಿಸಲು ಮುಂದಾಗಿ ಜಿಪಿಎ ಅಥವಾ ಒಪ್ಪಂದ ಮಾಡಿಕೊಂಡಿರುವ ನಾಗರಿಕರಿಗೂ ಬಿ–ಖಾತಾ ವಿತರಣೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಸಚಿವ ಸುರೇಶ್‌ ತಿಳಿಸಿದ್ದಾರೆ.

ಪುರಸಭೆ ಮತ್ತು ಪಟ್ಟಣ ಪಂಚಾಯತ್ ಪ್ರದೇಶಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು, ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಶುದ್ಧ ಮತ್ತು ರುಚಿಕರವಾದ ಆಹಾರವನ್ನು ನೀಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಜ್ ಸಚಿವ ರಹೀಂ ಖಾನ್ ಹೇಳಿದರು.

ಇಂದಿರಾ ಕ್ಯಾಂಟೀನ್‌ಗಳಿಗೆ ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. "ರಾಜ್ಯ ಸರ್ಕಾರ ಬಡವರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟೀನ್‌ಗಳನ್ನು ಜಾರಿಗೆ ತಂದಿದೆ. ಜನರು ಯಾವುದೇ ಅನಾನುಕೂಲತೆಯನ್ನು ಎದುರಿಸದಂತೆ ಈ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟದ ವ್ಯವಸ್ಥೆ ಮಾಡಬೇಕು. ಸಿಸಿಟಿವಿಗಳು ಕಾರ್ಯನಿರ್ವಹಿಸಬೇಕು ಮತ್ತು ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com