ಪಾಕ್ ಪರ ಘೋಷಣೆ: ಬೆಂಗಳೂರಿನಲ್ಲಿ ಟೆಕ್ಕಿ ಬಂಧನ

ಛತ್ತೀಸ್‌ಗಢ ಮೂಲದ ಶುಕ್ಲಾ, ಸ್ನೇಹಿತನೊಂದಿಗೆ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
Representational image
ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ಭಾರತೀಯ ಸೇನೆಯ ಆಪರೇಷನ್ ಸಿಂಧೂರ್‌ನ ಯಶಸ್ಸನ್ನು ಆಚರಿಸುವ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬೆಂಗಳೂರಿನ ಟೆಕ್ಕಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಶುಭಾಂಶು ಶುಕ್ಲಾ ಎಂಬುವವರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಮೇ 9 ರ ಮುಂಜಾನೆ ವೈಟ್‌ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ಈ ಘಟನೆ ಸಂಭವಿಸಿದೆ. ಛತ್ತೀಸ್‌ಗಢ ಮೂಲದ ಶುಕ್ಲಾ, ಸ್ನೇಹಿತನೊಂದಿಗೆ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪೊಲೀಸ್ ವರದಿಗಳ ಪ್ರಕಾರ, ಮೇ 9 ರಂದು ಸುಮಾರು 12:30 ರ ಸುಮಾರಿಗೆ, ಪಿಜಿಯಲ್ಲಿ ಹಲವಾರು ಯುವಕರು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನಡೆದ ಮಿಲಿಟರಿ ಕಾರ್ಯಾಚರಣೆಯಾದ ಆಪರೇಷನ್ ಸಿಂಧೂರ್‌ನ ವಿಜಯೋತ್ಸವವನ್ನು ಆಚರಿಸುತ್ತಿದ್ದರು.

Representational image
ಪಾಕಿಸ್ತಾನಕ್ಕೆ ಬೆಂಬಲ: ಟರ್ಕಿ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ; ರಾಜ್ಯ ಸರ್ಕಾರಕ್ಕೆ ಪಿ.ಸಿ ಮೋಹನ್ ಆಗ್ರಹ

ಆಚರಣೆಯ ಸಮಯದಲ್ಲಿ, ಶುಕ್ಲಾ ಬಾಲ್ಕನಿಗೆ ಹೋಗಿ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಇತರ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿತ್ತು.

ಅತ್ತ ಶುಭಾಂಶು ಶುಕ್ಲಾ ಪಾಕ್ ಪರ ಘೋಷಣೆ ಕೂಗುತ್ತಲೇ ಇತ್ತ ಯುವಕರು ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ಘಟನೆಯನ್ನು ವರದಿ ಮಾಡಿದರು.

ವೈಟ್‌ಫೀಲ್ಡ್ ಪೊಲೀಸರು ತ್ವರಿತವಾಗಿ ಪ್ರತಿಕ್ರಿಯಿಸಿ, ಸ್ಥಳಕ್ಕೆ ಆಗಮಿಸಿ ಶುಕ್ಲಾ ಅವರನ್ನು ವಶಕ್ಕೆ ಪಡೆದರು. ಅವರ ಕೃತ್ಯಗಳಿಗಾಗಿ ಕಾನೂನಿನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com