
ಯಾದಗಿರಿ: ಬಾವಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತ ಬಾಲಕಿಯರು ವೈಶಾಲಿ(17) ಮತ್ತು ನವೀತಾ(16) ಎಂದು ಗುರುತಿಸಲಾಗಿದ್ದು, ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ.
ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement