
ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡಿಗರ ಅವಹೇಳನ ಪ್ರಕರಣಗಳು ದಿನಕಳೆದಂತೆ ಹೆಚ್ಚಾಗುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿಯೆಂಬಂತೆ ಕೋರಮಂಗಲದಲ್ಲಿ ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿರುವ ಘಟನೆ ನಡೆದಿದೆ.
ಕೋರಮಂಗಲದ ನೆಕ್ಸಸ್ ಮಾಲ್ ಬಳಿ ಇರುವ ಕೇರಳ ಮೂಲದ ನೌಶಾದ್ ಮಾಲೀಕತ್ವದ ಜಿಎಸ್ ಸೂಟ್ಸ್ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಹೋಟಲ್ ಗೆ ಅಳವಡಿಸಿದ್ದ ಡಿಸ್ ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರು ತಲೆ ಹಿಡುಕರು ಎಂದು ಬರೆಯಲಾಗಿತ್ತು. ಇದನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು ವಿಡಿಯೋ ವೈರಲ್ ಆಗುತ್ತಿದ್ದಂತೆ ಹೋಟೆಲ್ ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಹೋಟೆಲ್ ಗೆ ಅಳವಡಿಸಲಾಗಿದ್ದ ಡಿಸ್ ಪ್ಲೇ ಬೋರ್ಡ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ಹೋಟೆಲ್ ಮ್ಯಾನೇಜರ್ ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸದ್ಯ ಹೋಟೆಲ್ ಮಾಲೀಕ ಕೇರಳದಲ್ಲಿದ್ದು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ವಾದಿಸಿದ್ದಾರೆ.
Advertisement