ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಚಿಂತನೆ; ಬಿ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಡಿ.ಕೆ.ಶಿ ಸುಳಿವು

ಎಲ್ಲಾ ಗೇಟ್ ಗಳನ್ನು ಬದಲಾವಣೆ ಮಾಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಏನು ತೀರ್ಮಾನ ಮಾಡಲಾಗಿದೆ ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಯಾವುದೇ ಕೆಲಸ ಮಾಡಬೇಕು ಎಂದರು ತಾಂತ್ರಿಕ ಸಮಿತಿಯಿಂದ ವರದಿ ಪಡೆಯಬೇಕು.
DK Shivakumar
ಡಿ.ಕೆ. ಶಿವಕುಮಾರ್
Updated on

ಹೊಸಪೇಟೆ: ತುಂಗಭದ್ರಾ ಅಣೆಕಟ್ಟಿನ ಹೂಳು ತೆಗೆಯುವುದು ಕಾರ್ಯಸಾಧುವಲ್ಲ. ಇದರ ಬದಲಾಗಿ ನವಲಿ ಬಳಿ ಸಮನಾಂತರ ಅಣೆಕಟ್ಟು ನಿರ್ಮಾಣ ಅಥವಾ ನಮ್ಮ ಪಾಲಿನ 27 ರಿಂದ 30 ಟಿಎಂಸಿ ನೀರನ್ನು ಬಸವಸಾಗರದಿಂದ ಪಂಪ್ ಮಾಡಿ ಮೇಲಿನ ಕೆರೆಗಳನ್ನು ತುಂಬಿಸುವ ಬಗ್ಗೆ ರಾಜ್ಯದ ತಾಂತ್ರಿಕ ಸಮಿತಿ ವರದಿ ನೀಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ಹಮ್ಮಿಕೊಂಡಿರುವ ಸಾಧನಾ ಸಮಾವೇಶದ ಪೂರ್ವ ಸಿದ್ಧತೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ ಅವರು ಶುಕ್ರವಾರ ಪರಿಶೀಲಿಸಿದರು. ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ಈ ಪ್ರಸ್ತಾವನೆಯನ್ನು ತುಂಗಭದ್ರಾ ನಿಗಮದ ಮುಂದಿಟ್ಟಿದ್ದೇವೆ. ಇದರ ಬಗ್ಗೆ ಚರ್ಚೆ ನಡೆಸಲು ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಸಮಯ ಕೇಳಿದ್ದೇನೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇನ್ನು ಸಮಯ ನೀಡಿಲ್ಲ. ಈ ಭಾಗದ ಜನರಿಗೆ ನವಲಿ ಅಣೆಕಟ್ಟು ಕಟ್ಟುವುದಾಗಿ ನಾವು ಬಜೆಟ್ ಅಲ್ಲಿ ಪ್ರಸ್ತಾವನೆ ಮಾಡಿದ್ದೆವು ಎಂದರು.

ಎಲ್ಲಾ ಗೇಟ್ ಗಳನ್ನು ಬದಲಾವಣೆ ಮಾಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. ಏನು ತೀರ್ಮಾನ ಮಾಡಲಾಗಿದೆ ಎಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಯಾವುದೇ ಕೆಲಸ ಮಾಡಬೇಕು ಎಂದರು ತಾಂತ್ರಿಕ ಸಮಿತಿಯಿಂದ ವರದಿ ಪಡೆಯಬೇಕು. ಏಕಾಏಕಿ ನಡೆಸಲು ಆಗುವುದಿಲ್ಲ. ತುಂಗಭದ್ರಾ ಬೋರ್ಡ್ ನಿಂದಲೇ ಇದು ತೀರ್ಮಾನವಾಗಬೇಕು. ನಾವೋಬ್ಬರೇ ತೀರ್ಮಾನ ಮಾಡಲು ಆಗುವುದಿಲ್ಲ. ಮೂರು ರಾಜ್ಯಗಳು ಸೇರಿ ಇದನ್ನು ಮಾಡಬೇಕು. ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಚರ್ಚೆ ನಡೆಸಲಾಗುವುದು. ತೆಲಂಗಾಣದವರಿಗೆ ಈ ಬಗ್ಗೆ ತಿಳಿಸಿದ್ದು ಅವರೂ ಸಹ ಚರ್ಚೆ ನಡೆಸುತ್ತಿದ್ದಾರೆ ಎಂದರು. ನಾನೇ ಕಳೆದ ವಾರ ಖುದ್ದಾಗಿ ನಾಲ್ಕು ಜನ ಕೇಂದ್ರ ಸಚಿವರನ್ನು ಭೇಟಿಯಾಗಿದ್ದೆ. ಕೇಂದ್ರ ಅರಣ್ಯ ಸಚಿವರು ನಮ್ಮ ಅಧಿಕಾರಿಗಳನ್ನು ಅಲ್ಲಿಯೇ ಇರಿಸಿಕೊಂಡು ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದ್ದರು ಎಂದರು.

DK Shivakumar
ನೀರಾವರಿ ಸಚಿವರುಗಳ ಸಭೆ: ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ- ಡಿ.ಕೆ ಶಿವಕುಮಾರ್

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಸಹ ನಮ್ಮ ರಾಜ್ಯದ ಜನ ಡಬಲ್ ಎಂಜಿನ್ ಸರ್ಕಾರಕ್ಕೆ ಅವಕಾಶ ನೀಡದೆ ನಮ್ಮ ಮೇಲೆ ನಂಬಿಕೆಯನ್ನಿಟ್ಟರು. ನಾವು ಈ ಎರಡು ವರ್ಷದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಈ ಭಾಗಕ್ಕೆ ಹೆಚ್ಚಿನ ಶಕ್ತಿ ನೀಡಲು ಈ ಎರಡು ವರ್ಷದ ಸಂಭ್ರಮವನ್ನು ಮೇ.20 ರಂದು ವಿಜಯನಗರದಲ್ಲಿ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

“ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸುತ್ತಿದೆ. 2023 ಮೇ 13 ರಂದು ಈ ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವನ್ನಿಟ್ಟು 136 ಜನರನ್ನು ಗೆಲ್ಲಿಸಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರು. ಉಪಚುನಾವಣೆ ಸೇರಿ ನಮ್ಮ ಬಲ 138 ಕ್ಕೆ ಏರಿದೆ. ಪಕ್ಷೇತರರ ಬೆಂಬಲ ಸೇರಿ 140 ಜನ ಶಾಸಕರ ಬೆಂಬಲ ಇರುವಂತಹ ಅತ್ಯಂತ ಬಲಿಷ್ಠ ಸರ್ಕಾರ” ಎಂದು ನುಡಿದರು.

ನಾಗೇಂದ್ರ ಅವರು ಮತ್ತೆ ಸಚಿವರಾಗುತ್ತಾರೆಯೇ ಎಂದು ಕೇಳಿದಾಗ, “ಅವರು ಸಂಪೂರ್ಣವಾಗಿ ಸಮರ್ಥರಿದ್ದಾರೆ” ಎಂದು ಹೇಳಿದರು. ಸ್ಥಳೀಯ ಮಟ್ಟದ ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯ ಮೂಡಿರುವ ಬಗ್ಗೆ ಕೇಳಿದಾಗ, “ಯಾವ ಭಿನ್ನಾಭಿಪ್ರಾಯವೂ ಇಲ್ಲ. ಇಲ್ಲಿ ವ್ಯಕ್ತಿಪೂಜೆಯಿಲ್ಲ, ಪಕ್ಷದ ಪೂಜೆ ಮಾತ್ರ. ಜಿಲ್ಲೆಯಲ್ಲಿ ಯಾವ ಬಣವೂ ಇಲ್ಲ. ನಮ್ಮದು ಕಾಂಗ್ರೆಸ್ ಒಂದೇ ಬಣ. ಮಾಧ್ಯಮದವರು ಹೇಳುತ್ತೀರಿ ಎಂದರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದರು. ಕೆಎಂಎಫ್ ಅಧ್ಯಕ್ಷರಾದ ಭೀಮಾನಾಯ್ಕ್ ಅವರು ಮಾದಿಗ ಸಮುದಾಯಕ್ಕೆ ಅಪಮಾನ ಮಾಡಿ ಮಾತನಾಡಿದ್ದಾರೆ ಎಂದು ಕೇಳಿದಾಗ, “ಈ ಬಗ್ಗೆ ವಿಚಾರಿಸುತ್ತೇನೆ” ಎಂದು ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com