ಸಾರ್ವಜನಿಕ ಸಾರಿಗೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ

ಕೇಂದ್ರ ಪ್ರಾಯೋಜಿತ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ನವದೆಹಲಿಯ ಕುಮಾರಸ್ವಾಮಿಯವರ ಸಚಿವಾಲಯಕ್ಕೆ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದರು.
ಕುಮಾರಸ್ವಾಮಿ ಭೇಟಿಯಾದ ರಾಮಲಿಂಗಾ ರೆಡ್ಡಿ.
ಕುಮಾರಸ್ವಾಮಿ ಭೇಟಿಯಾದ ರಾಮಲಿಂಗಾ ರೆಡ್ಡಿ.
Updated on

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಭರವಸೆ ನೀಡಿದರು,

ಕೇಂದ್ರ ಪ್ರಾಯೋಜಿತ ಪಿಎಂ ಇ-ಡ್ರೈವ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಹೆಚ್ಚು ಪ್ರಮಾಣದಲ್ಲಿ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಬೇಕು ಎಂದು ರಾಜ್ಯದ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ನವದೆಹಲಿಯ ಕುಮಾರಸ್ವಾಮಿಯವರ ಸಚಿವಾಲಯಕ್ಕೆ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದರು.

ಈ ವೇಳೆ ರಾಮಲಿಂಗಾ ರೆಡ್ಡಿಯವರು ಕುಮಾರಸ್ವಾಮಿ ಅವರೊಂದಿಗೆ ರಾಜ್ಯದ ನಗರ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಿದರು.

ಈ ವೇಳೆ ಕರ್ನಾಟಕ ಸರಕಾರಕ್ಕೆ ಕೇಂದ್ರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಸಚಿವ ಕುಮಾರಸ್ವಾಮಿ ಅವರು, ವಿದ್ಯುತ್‌ ಚಾಲಿತ ಬಸ್ಸುಗಳ ಹಂಚಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ ಮತ್ತು ಕರ್ನಾಟಕಕ್ಕೆ ಹಂತಹಂತವಾಗಿ ಮತ್ತು ಆದ್ಯತೆಯ ಮೇರೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪಿಎಂ ಇ–ಡ್ರೈವ್ ಉಪಕ್ರಮದಡಿ 9 ಪ್ರಮುಖ ನಗರಗಳಿಗೆ 14,000 ವಿದ್ಯುತ್‌ ಚಾಲಿತ ಬಸ್‌ಗಳನ್ನು ಹಂಚಿಕೆ ಮಾಡಲಾಗುವುದು. ಚಾರ್ಜಿಂಗ್ ಸ್ಟೇಷನ್‌, ಬಸ್ ಡಿಪೊಗಳು ಮತ್ತು ವಾಹನ ನಿರ್ವಹಣಾ ವ್ಯವಸ್ಥೆ ಸೇರಿ ಸಂಬಂಧಿತ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಚರ್ಚಿಸಿವೆ. ಈ ಯೋಜನೆಯ ತ್ವರಿತ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯದ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಪಿಎಂ ಇ-ಡ್ರೈವ್ ಉಪಕ್ರಮವು 14,028 ವಿದ್ಯುತ್‌ ಚಾಲಿತ ಬಸ್‌‌ಗಳೊಂದಿಗೆ ನಗರಗಳಲ್ಲಿ ವಾಯುಮಾಲಿನ್ಯ ರಹಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಗುರಿ ಹೊಂದಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಎರಡು ವರ್ಷಗಳ ಅವಧಿಯಲ್ಲಿ ರೂ.10,900 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.

ಕುಮಾರಸ್ವಾಮಿ ಭೇಟಿಯಾದ ರಾಮಲಿಂಗಾ ರೆಡ್ಡಿ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ಕುರಿತು ವದಂತಿ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com