ಆಂಧ್ರ ಪ್ರದೇಶ: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವು

ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ.
ಬಾವಿಗೆ ಬಿದ್ದ ಕಾರು
ಬಾವಿಗೆ ಬಿದ್ದ ಕಾರು
Updated on

ಅನ್ನಮಯ್ಯ: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಭಾನುವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.

ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಬಾವಿಗೆ ಬಿದ್ದ ಕಾರು
ಭೀಕರ ಅಪಘಾತ: ಅಚಾನಕ್ ಹಿಮ್ಮುಖವಾಗಿ ಚಲಿಸಿದ ಟ್ರಕ್; ಹಿಂದೆ ಸ್ಕೂಟರ್ ನಲ್ಲಿದ್ದ ಮಹಿಳೆ ಸ್ವಲ್ಪದರಲ್ಲಿ ಬಚಾವ್! Video

ಬಾವಿ ಆಳವಾಗಿದ್ದರಿಂದ ಕಾರೊನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಿದ್ದಾರೆ.

ಈ ಸಂಬಂಧ ಪಿಲೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com