ಬೆಂಗಳೂರಿನ ಮಳೆಗೆ ಕುಸಿದುಬಿದ್ದ ಗೋಡೆ (ಸಂಗ್ರಹ ಚಿತ್ರ)online desk
ರಾಜ್ಯ
Bengaluru rain: Whitefield ನಲ್ಲಿ ಗೋಡೆ ಕುಸಿದು ಮಹಿಳೆ ಸಾವು!
ಮೃತ ಮಹಿಳೆಯನ್ನು 35 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ.
ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ವೈಟ್ ಫೀಲ್ಡ್ (WhiteField) ನಲ್ಲಿ ಈ ದುರ್ಘಟನೆ ನಡೆದಿದ್ದು, 35 ವರ್ಷದ ಶಶಿಕಲಾ ಎಂಬುವವರ ಮೇಲೆ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದಾರೆ. ಈ ಘಟನೆ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ.
ಭಾರಿ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಎಂಬ ಖಾಸಗಿ ಕಂಪನಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು 35 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಭಾರಿ ಮಳೆಗೆ ಮರದ ಕೊಂಬೆ ಆಟೋ ಮೇಲೆ ಬಿದ್ದಿದ್ದ ಪರಿಣಾಮ ಆಟೋ ಚಾಲಕ ಮೃತಪಟ್ಟಿದ್ದರು.
ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ