ಸಿಟಿ ರೌಂಡ್ಸ್ ರದ್ದು: ಬಿಬಿಎಂಪಿ ವಾರ್ ರೂಮ್ ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಸಂಜೆ ಸಿಟಿ ರೌಂಡ್ಸ್ ಹೋಗಲು ನಿರ್ಧರಿಸಿದ್ದರು.
ಬಿಬಿಎಂಪಿ ವಾರ್ ರೂಮ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಬಿಬಿಎಂಪಿ ವಾರ್ ರೂಮ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವು ಕಡೆ ಅವಾಂತರಗಳನ್ನು ಸೃಷ್ಟಿಸಿದೆ. ಇನ್ನೂ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಸಿಟಿ ಜನರು ನಿಂತ ನೀರಲ್ಲಿ ನಡುಗುವಂತಾಗಿದೆ.

ಮಳೆ ಅನಾಹುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಸಂಜೆ ಸಿಟಿ ರೌಂಡ್ಸ್ ಹೋಗಲು ನಿರ್ಧರಿಸಿದ್ದರು. ಆದರೆ ತಮ್ಮಿಂದ ಟ್ರಾಫಿಕ್ ಉಂಟಾಗಿ ಜನರಿಗೆ ಮತ್ತಷ್ಟು ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಸಿಟಿ ರೌಂಡ್ಸ್ ಕ್ಯಾನ್ಸಲ್ ಮಾಡಿದ್ದು, ಮೇ 21 ರಂದು ಸಿಟಿ ರೌಂಡ್ಸ್ ಹೋಗುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಟಿ ರೌಂಡ್ಸ್ ರದ್ದು ಮಾಡಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅದೇ ಬಿಎಂಟಿಸಿ ಬಸ್‌ನಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಬಿಬಿಎಂಪಿ ವಾರ್ ರೂಂಗೆ ತೆರಳಿದರು. ಸಚಿವ ಕೆ.ಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಾಥ್ ನೀಡಿದರು.

ಬಿಬಿಎಂಪಿ ವಾರ್ ರೂಮ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ಮಳೆ ಅವಾಂತರ: ಈ ಸಮಸ್ಯೆ ಹೊಸದಲ್ಲ, ನಿಮ್ಮೊಂದಿಗೆ ನಿಲ್ಲುತ್ತೇನೆ; ಡಿ.ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್

ಬಿಬಿಎಂಪಿ ವಾರ್ ರೂಮ್‌ನಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ, ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಪ್ರಮುಖವಾಗಿ ಮಳೆಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಅವಲೋಕಿಸಿದರು.

ಇನ್ನು ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದ್ದು. ವೈಟ್ ಫೀಲ್ಡ್ ನಲ್ಲಿ ಕಾಂಪೌಂಡ್ ಗೋಡೆ​ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com