ಕನಕಪುರ ರಸ್ತೆಯಲ್ಲಿ KSRTC ಬಸ್ ಪಲ್ಟಿ: ಎಲೆಕ್ಟ್ರಾನಿಕ್ ಸಿಟಿ PSI ನಾಗರಾಜ್ ಸೇರಿ ಇಬ್ಬರು ಸಾವು

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೋರಿಗೆ ಬಿದ್ದ ಬಸ್
ಮೋರಿಗೆ ಬಿದ್ದ ಬಸ್
Updated on

ಕನಕಪುರ: ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ‌ ಹತ್ತಿಸಿದ್ದಾನೆ.

ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋರಿಗೆ ಬಿದ್ದ ಬಸ್
ಭೀಕರ ಅಪಘಾತ: ಅಚಾನಕ್ ಹಿಮ್ಮುಖವಾಗಿ ಚಲಿಸಿದ ಟ್ರಕ್; ಹಿಂದೆ ಸ್ಕೂಟರ್ ನಲ್ಲಿದ್ದ ಮಹಿಳೆ ಸ್ವಲ್ಪದರಲ್ಲಿ ಬಚಾವ್! Video

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com