ಪಂಜಾಬ್: ಧರ್ಮಸ್ಥಳದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಸಾವಿನ ಕಾರಣ ಕೊನೆಗೂ ಬಹಿರಂಗ!

ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕಾಗಿ ಜಪಾನ್​ಗೆ ಹೋಗಲು ಯೋಚಿಸಿದ್ದರು.
Akanksha S. Nair
ಆಕಾಂಕ್ಷಾ ಎಸ್ ನಾಯರ್
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ದ ಕಾರಣ ತಿಳಿದು ಬಂದಿದೆ.

ಯುವತಿ ಆಕಾಂಕ್ಷಾ ಎಸ್ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಮೇ 17 ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಆಕಾಂಕ್ಷಾ ಅವರು ಇದೇ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದರು. ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆಯಾಗಿದ್ದಾರೆ. ಆಕಾಂಕ್ಷಾ ಪ್ರಾಧ್ಯಾಪಕ ಮ್ಯಾಥ್ಯೂ ಅವರ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದರು.

ಬಳಿಕ ಆಕಾಂಕ್ಷಾ ಕಾಲೇಜಿನಲ್ಲೂ‌ ಬಿಜಿಲ್ ಮ್ಯಾಥ್ಯೂ ಅವರ ಜೊತೆ ಜಗಳವಾಡಿದ್ದಾರೆ. ನಂತರ, ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಮ್ಯಾಥ್ಯೂ ವಿರುದ್ಧ ಪಂಜಾಬ್​ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ (ಮೇ 19) ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

Akanksha S. Nair
ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕಾಗಿ ಜಪಾನ್​ಗೆ ಹೋಗಲು ಯೋಚಿಸಿದ್ದರು. ಈ ಹಿನ್ನೆಲೆಯಲ್ಲಿ, ಶನಿವಾರ (ಮೇ 19) ಕಾಲೇಜಿಗೆ ತೆರಳಿ ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡು ಬರಲು ಹೋಗಿದ್ದರು. ಅಲ್ಲದೆ, ಸರ್ಟಿಫಿಕೇಟ್​ಗಳನ್ನು ತೆಗೆದುಕೊಂಡಿರುವುದಾಗಿ ಪೋಷಕರಿಗೆ ಕರೆ ಮಾಡಿ ಆಕಾಂಕ್ಷಾ ತಿಳಿಸಿದ್ದರು.

ಸುರೇಂದ್ರ ಮತ್ತು ಸಿಂಧೂದೇವಿ ದಂಪತಿಗೆ ಪುತ್ರಿ ಆಕಾಂಕ್ಷ, ಮತ್ತೊಬ್ಬ ಪುತ್ರ ಇದ್ದು, ಅವರಿಗೆ ಇತ್ತೀಚೆಗೆ ಕೇರಳದಲ್ಲಿ ವಿವಾಹವಾಗಿತ್ತು. ಶಾಸಕ ಹರೀಶ್ ಪೂಂಜ ಅವರು ಆಕಾಂಕ್ಷ ಕುಟುಂಬದವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಆಕಾಂಕ್ಷ ಅವರನ್ನು ಕೊಲೆ ಮಾಡಲಾಗಿದ್ದು, ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಕಾಂಕ್ಷ ಅವರ ಪೋಷಕರು ‌ಶಾಸಕರಲ್ಲಿ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com