ಭಾರೀ ಮಳೆಗೆ ಬೆಂಗಳೂರು ತತ್ತರ: ಪ್ರವಾಹ ಪರಿಸ್ಥಿತಿಗೆ ಅನಿರೀಕ್ಷಿತ ಮಳೆ ಕಾರಣ; ಸಾಧನಾ ಸಮಾವೇಶದ ಬಳಿಕ ಸಿಟಿ ರೌಂಡ್ಸ್ ಎಂದ ಸಿಎಂ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಎರಡು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನ ಸಮಾವೇಶ ನಡೆಸಲಾಗುತ್ತಿದ್ದು, ಈ ಸಮಾವೇಶದ ಬಳಿಕ ಬೆಂಗಳೂರು ಸಿಟಿ ರೌಂಡ್ಸ್ ಮಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು, ಕಾಂಗ್ರೆಸ್ ಸಾಧನಾ ಸಮಾವೇಶ ಪೂರ್ಣಗೊಂಡ ಬಳಿಕ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದು ಹೇಳಿದರು.

ಮಳೆಯಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ಮತ್ತು ನಾಗರಿಕರ ಕುಂದುಕೊರತೆಗಳನ್ನು ಆಲಿಸಲು ಸೋಮವಾರ ಸಂಜೆ ನಗರ ನಗರ ಪ್ರದಕ್ಷಿಣೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಸಾರ್ವಜನಿಕರಿಗೆ ಅನಾನುಕೂಲತೆಯನ್ನುಂಟುಮಾಡಲು ಬಯಸುವುದಿಲ್ಲ. ಕತ್ತಲಾದ ನಂತರ ಮಳೆಯಿಂದ ಉಂಟಾದ ಹಾನಿಯನ್ನು ಸಂಪೂರ್ಣವಾಗಿ ನೋಡಲು ಮತ್ತು ಸಂತ್ರಸ್ತರೊಂದಿಗೆ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿ, ಮಳೆ ಹಾನಿಯನ್ನು ಪರಿಶೀಲಿಸಲು ಎನ್ಆರ್ ಸ್ಕ್ವೇರ್‌ನಲ್ಲಿರುವ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗೆ ಭೇಟಿ ನೀಡಿದರು.

ಈ ವೇಳೆ ಬಿಬಿಎಂಪಿ ವಲಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆಯಲ್ಲಿ ಸಂವಾದ ನಡೆಸಿದ ಅವರು, ನಗರದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಎರಡು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಸಾಧನ ಸಮಾವೇಶ ನಡೆಸಲಾಗುತ್ತಿದ್ದು, ಈ ಸಮಾವೇಶದ ಬಳಿಕ ಬೆಂಗಳೂರು ಸಿಟಿ ರೌಂಡ್ಸ್ ಮಾಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿಟಿ ರೌಂಡ್ಸ್ ರದ್ದು: ಬಿಬಿಎಂಪಿ ವಾರ್ ರೂಮ್ ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ

ಇದೇ ವೇಳೆ ಸಾಮಾಜಿಕ ಜಾಲತಾಣಗಳ ವೈರಸ್ ಪೋಸ್ಟ್ ಗಳ ಕುರಿತು ಪ್ರತಿಕ್ರಿಯಿಸಿದ ಅವರು. ಕಳೆದ 24 ಗಂಟೆಗಳಲ್ಲಿ ನಮಗೆ ಅನಿರೀಕ್ಷಿತವಾಗಿ 104 ಮಿಮೀ ಮಳೆಯಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳು ಪರಿಣಾಮ ಬೀರಿವೆ. ಮಳೆನೀರಿನ ಚರಂಡಿಗಳ (SWD) ಅತಿಕ್ರಮಣ, ಹೂಳು ಸಂಗ್ರಹ ಮತ್ತು ಚರಂಡಿಗಳ ಆಳದ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಮುಚ್ಚಿಹೋಗಿರುವ ಒಳಚರಂಡಿ ಸಂಪರ್ಕ ಮರುರೂಪಿಸುವಿಕೆ ಮತ್ತು ಹೂಳು ತೆಗೆಯುವಿಕೆಯನ್ನು ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಒಳಚರಂಡಿ ಜಾಲದ ಬಗ್ಗೆ ವಿವರಗಳನ್ನು ನೀಡಿದ ಸಿಎಂ, ಬೆಂಗಳೂರಿನಲ್ಲಿ ಒಟ್ಟು 859.90 ಕಿ.ಮೀ ಒಳಚರಂಡಿ ಕೊಳವೆಗಳಿದ್ದು, ಇಲ್ಲಿಯವರೆಗೆ 491 ಕಿಮಿ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಉದ್ದದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮಿ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ವತಿಯಿಂದ ಕೈಗೊಳ್ಳಲಾಗಿದೆ. ರಾಜಕಾಲುವೆ ಕಾರ್ಯ ಪ್ರಗತಿಯಲ್ಲಿದೆ. ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ನಗರದಲ್ಲಿ ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತು ಮಾಡಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಬಾಕಿ 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ 24 ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಈ ಸಮಸ್ಯೆ ಬಹಳಷ್ಟು ಕಡಿಮೆಯಾಗಲಿದೆ ಎಂದು ತಿಳಿಸಿದರು.

SWD ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂಬ ಪ್ರಶ್ನೆ ಉತ್ತರಿಸಿದ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ ಪ್ರಭಾವವನ್ನು ಲೆಕ್ಕಿಸದೆ ಅತಿಕ್ರಮಣದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. "4,292 ಅತಿಕ್ರಮಣಗಳಲ್ಲಿ 2,326 ಅನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಜೊತೆಗಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸಂಚಾರ ಪೊಲೀಸರು 132 ಸ್ಥಳಗಳನ್ನು ಗುರುತಿಸಿದ್ದಾರೆ. ಈ ಪೈಕಿ 82 ಕಾಮಗಾರಿ ಪೂರ್ಣಗೊಂಡಿದ್ದು, 41 ಕಾಮಗಾರಿಗಳು ಬಾಕಿ ಇವೆ. ಈ ವರ್ಷ ಇಡೀ ಬೆಂಗಳೂರಿನ ರಾಜಕಾಲುವೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್, ಹೆಬ್ಬಾಳ ಜಂಕ್ಷನ್ ಬಳಿ ಅತಿ ಹೆಚ್ಚು ಮಳೆಯಾಗಿದ್ದು, ನೀರು ಹರಿದುಹೋಗುವಂತೆ ದಾರಿ ಮಾಡಲು ರೈಲ್ವೆಯವರಿಗೆ ಕೆಲಸವನ್ನು ವಹಿಸಲಾಗಿದೆ ಎಂದು ವಿವರಿಸಿದರು.

ಮಳೆಯಾಗುವುದು ಪ್ರಕೃತಿ ನಿಯಮ, ನಗರದ ಪರಿಸ್ಥಿತಿ ಸುಧಾರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮಳೆ ನೀರು ಚರಂಡಿಗಳಿಗಾಗಿ 2,000 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು.

ಮಾನ್ಯತಾ ಟೆಕ್ ಪಾರ್ಕ್‌ನಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಮಾತನಾಡಿ, ಕೆಲವು ಅತಿಕ್ರಮಣಗಳಿವೆ. ಅವರು ಸರ್ಕಾರದ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅತಿಕ್ರಮಣಗಳನ್ನು ತೆರವುಗೊಳಿಸಲು ಮತ್ತು ಯಾವುದೇ ಪ್ರವಾಹ ಉಂಟಾಗದಂತೆ ನೋಡಿಕೊಳ್ಳಲು ವಿಪತ್ತು ನಿರ್ವಹಣೆಯ ಅಡಿಯಲ್ಲಿ ನಿರ್ದಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಕುರಿತ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕೆಗೆ ಉತ್ತರಿಸಿ, ಕುಮಾರಸ್ವಾಮಿ ಹತಾಶೆಗೊಂಡ ವ್ಯಕ್ತಿ. ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಾಡಿದ ಸಾಧನೆಗಳನ್ನು ನೋಡಿ ಹತಾಶೆಯಲ್ಲಿದ್ದಾರೆ ಎಂದು ಹೇಳಿದರು.

ಕೇವಲ ಟೀಕೆಗಳನ್ನು ಮಾಡುವುದಲ್ಲ. ನಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆಗೆ ಬರಲಿ ಎಂದು ಇದೇ ವೇಳೆ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com