
ಬೆಂಗಳೂರು: ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಇನ್ನು 5 ದಿನಗಳ ರಾಜ್ಯದಲ್ಲಿ ವ್ಯಾಪಕ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಬರೊಬ್ಬರಿ 7 ಜಿಲ್ಲೆಗಳಲ್ಲಿ Red Alert ಘೋಷಣೆ ಮಾಡಿದೆ.
ಹೌದು.. ಮಂಗಳವಾರ ಸಂಜೆ ಭಾರತದ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಏಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ಹಿಂದೆ ನೀಡಿದ್ದ ಅಲರ್ಟ್ ಅನ್ನು ರೆಡ್ ಅಲರ್ಟ್‌ಗೆ ನವೀಕರಿಸಿದೆ. ರಾಜ್ಯಾದ್ಯಂತ ಭಾರಿ ಮಳೆ ಮುಂದವರೆಯಲಿದ್ದು, ಕರಾವಳಿ ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ Red Alert ಘೋಷಣೆ ಮಾಡಿದೆ.
ಇತ್ತೀಚಿನ ಬುಲೆಟಿನ್ ಪ್ರಕಾರ, ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ರಾತ್ರಿಯಲ್ಲಿ ಅತಿ ಹೆಚ್ಚು ಮಳೆ, ಆಲಿಕಲ್ಲು ಮಳೆ ಮತ್ತು ಬಲವಾದ ಗಾಳಿ ಬೀಸಲಿದೆ. ಎಲ್ಲಾ ಏಳು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಂತೆಯೇ ಮುಂದಿನ 24 ಗಂಟೆಗಳಲ್ಲಿ ನಿರೀಕ್ಷಿತ ಮಳೆಯಾಗುವ ಕಾರಣ ಕೆಲವು ಸಂಪೂರ್ಣವಾಗಿ ತೇವಾಂಶದಿಂದ ಕೂಡಿದ ಮಣ್ಣು ಕುಸಿಯುವ ಸಾಧ್ಯತೆ ಮತ್ತು ತಗ್ಗು ಪ್ರದೇಶಗಳು ಪ್ರವಾಹದ ನೀರಿನಿಂದ ಮುಳುಗಡೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ಬೆಂಗಳೂರಿಗೆ ಆರೆಂಜ್ ಅಲರ್ಟ್
ಏತನ್ಮಧ್ಯೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆ ಮುಂದುವರೆಯಲಿದೆ ಎಂದು ಐಎಂಡಿ ಮಾಹಿತಿ ನೀಡಿದ್ದು, ಮಂಗಳವಾರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.30 ರವರೆಗೆ 0.4 ಮಿಮೀ ಮಳೆ ದಾಖಲಾಗಿದೆ. ದಿನವಿಡೀ ಸ್ಥಿರವಾಗಿ ಮಳೆಯಾಗುತ್ತಿದ್ದರೂ ಬೆಂಗಳೂರು ಇನ್ನೂ ಕಿತ್ತಳೆ ಎಚ್ಚರಿಕೆ ವಿಭಾಗದಲ್ಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಪರಿಸ್ಥಿತಿ ಸ್ಥಿರವಾಗುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದ್ದು, ವಾಯುವ್ಯ ಬೆಂಗಳೂರಿನ ಕಡೆಗೆ ಗುಡುಗು ಸಹಿತ ಮಳೆ ವೇಗವಾಗಿ ಚಲಿಸುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
RCB ಪಂದ್ಯಗಳು ಲಕ್ನೋಗೆ ಶಿಫ್ಟ್!
ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳನ್ನು ಬಿಸಿಸಿಐ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಏಕಾನಾ ಕ್ರೀಡಾಂಗಣಕ್ಕೆ ವರ್ಗಾವಣೆ ಮಾಡಿದೆ.
ಹಾಲಿ ಟೂರ್ನಿಯಲ್ಲಿ ಈಗಾಗಲೇ ತಲಾ 17 ಅಂಕಗಳೊಂದಿಗೆ ಆರ್ ಸಿಬಿ ಪ್ಲೇ ಆಫ್ ಹಂತಕ್ಕೇರಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೇ 23ರಂದು ನಡೆಯಬೇಕಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.
ಈ ಬಗ್ಗೆ ಸ್ವತಃ ಆರ್ ಸಿಬಿ ಅಧಿಕೃತ ಖಾತೆಯಲ್ಲಿ ಮಾಹಿತಿ ನೀಡಿದ್ದು, 'ಬೆಂಗಳೂರಿನಲ್ಲಿ ಪ್ರತಿಕೂಲ ಹವಾಮಾನದಿಂದಾಗಿ, ಐಪಿಎಲ್ ಆಡಳಿತ ಮಂಡಳಿಯು ಇದೇ ಮೇ 23 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ನಮ್ಮ ತವರು ಪಂದ್ಯವನ್ನು ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ಮಾಹಿತಿ ನೀಡಿದೆ.
Advertisement