ಮತ್ತೆ ಕೊರೊನಾ ಆತಂಕ; ರಾಜ್ಯದಲ್ಲಿ 8 ಸೇರಿ ದೇಶಾದ್ಯಂತ 257 ಪ್ರಕರಣ ಪತ್ತೆ

ರಾಜ್ಯದಲ್ಲಿ ಹೊಸದಾಗಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
Updated on

ಬೆಂಗಳೂರು: ಚೀನಾದ ಹಾಂಗ್ ಕಾಂಗ್ ಮತ್ತು ಸಿಂಗಾಪುರದ ನಂತರ ಈಗ ಭಾರತದಲ್ಲೂ ಮಹಾಮಾರಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ.

ರಾಜ್ಯದಲ್ಲಿ ಹೊಸದಾಗಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ದೇಶದಲ್ಲಿ ಇದುವರೆಗೆ 257 ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ.

ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಮತ್ತೆ ಕೊರೊನಾವೈರಸ್ ಆತಂಕ; ಬಾಲಿವುಡ್ ನಟಿ ಶಿಲ್ಪಾ ಶಿರೋಧ್ಕರ್‌ಗೆ ಕೋವಿಡ್ ಪಾಸಿಟಿವ್!

ಇನ್ನು ಮುಂಬೈನಲ್ಲಿ ಕೋವಿಡ್‌-19ನಿಂದಾಗಿ ಓರ್ವ ಬಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಆದರೆ, ಸೋಂಕಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ತಿಳಿಸಿದೆ.

ಮೃತಪಟ್ಟ ಇಬ್ಬರಿಗೂ ಬೇರೆ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು. ಕೇವಲ ವೈರಸ್‌ನಿಂದ ಇವರ ಸಾವು ಸಂಭವಿಸಿಲ್ಲ ಎಂದು ಮುಂಬೈನ ಕೆಇಎಂ ಆಸ್ಪತ್ರೆ ಮತ್ತು ಬಿಎಂಸಿ ಸ್ಪಷ್ಟಪಡಿಸಿವೆ.

ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com