ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ AAP ನಾಯಕನ ಮೇಲೆ ಶಾಸಕ ಹ್ಯಾರಿಸ್, ಬೆಂಬಲಿಗರಿಂದ ಹಲ್ಲೆ..!

ಶಾಸಕ ಹ್ಯಾರಿಸ್ ದೊಮ್ಮಲೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಎಎಪಿ ಮುಖಂಡ ಶಿವಕುಮಾರ್ ನಾಯ್ಡು ಅವರು ಧ್ವನಿ ಎತ್ತಿದ್ದರು.
ಶಾಸಕ ಎನ್ ಎ ಹ್ಯಾರಿಸ್
ಶಾಸಕ ಎನ್ ಎ ಹ್ಯಾರಿಸ್
Updated on

ಬೆಂಗಳೂರು: ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರು ಹಲ್ಲೆ ನಡೆಸಿದ ಆರೋಪವೊಂದು ಕೇಳಿ ಬಂದಿದೆ.

ಈ ಸಂಬಂಧ ಎಎಪಿ ವಕ್ತಾರ ಅಶೋಕ್ ಮೃತ್ಯುಂಜಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹ್ಯಾರಿಸ್ ಗೂಂಡಾಗಿರಿ ನಡೆಸಿದ್ದಾರೆಂದು ಆರೋಪಿಸಿದ್ದಾರೆ.

ಶಾಸಕ ಹ್ಯಾರಿಸ್ ದೊಮ್ಮಲೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಎಎಪಿ ಮುಖಂಡ ಶಿವಕುಮಾರ್ ನಾಯ್ಡು ಅವರು ಧ್ವನಿ ಎತ್ತಿದ್ದರು. ಈ ವೇಳೆ ಹ್ಯಾರಿಸ್ ಹಾಗೂ ಅವರ ಬೆಂಬಪಿಗರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.

ಅಲ್ಲದೆ, ಹಲ್ಲೆ ನಡೆಸಿದ ಹ್ಯಾರಿಸ್ ಹಾಗೂ ಅವರ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಅವರು, ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರಿನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಶಿವಕುಮಾರ್‌ ನಾಯ್ಡು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಅವರು, ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರಿನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಶಿವಕುಮಾರ್‌ ನಾಯ್ಡು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕ ಎನ್ ಎ ಹ್ಯಾರಿಸ್
ಕಾಂಗ್ರೆಸ್, AIMIM ನಂತರ ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ AAP

ಭಾನುವಾರ ದೊಮ್ಮಲೂರಿನಲ್ಲಿ ಶಾಸಕರ ವಾರ್ಡ್ ಭೇಟಿ ಇತ್ತು. ಈ ವೇಳೆ ಸ್ಥಳೀಯ ಸಮಸ್ಯೆಗಳ ಮಾತನಾಡಿದ್ದಕ್ಕೆ ಶಿವಕುಮಾರ್ ನಾಯ್ಡು ಅವರ ಮೇಲೆ ಹ್ಯಾರಿಸ್, ಸ್ಥಳೀಯ ಮಾಜಿ ಕಾರ್ಪೊರೇಟರ್‌ ಶ್ರೀನಿವಾಸ್ ರೆಡ್ಡಿ ಮತ್ತಿತರ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಏಕಾಏಕಿ ಶಾಸಕರೇ ಈ ರೀತಿ ಹಲ್ಲೆ ನಡೆಸಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಶಾಸಕರು ಹಾಗೂ ಅವರ ಪುತ್ರನ ಗೂಂಡಾ ವರ್ತನೆಗಳ ಮೂಲಕ 'ಶಾಂತಿನಗರ ರಿಪಬ್ಲಿಕ್' ಮಾಡಲು ಎಎಪಿ ಎಂದಿಗೂ ಬಿಡುವುದಿಲ್ಲ. ಈಗಾಗಲೇ ಈ ಗೂಂಡಾ ಶಾಸಕರ ವಿರುದ್ಧ ನಾವು ಸಾಕಷ್ಟು ಹೋರಾಟ ಮಾಡಿದ್ದು ಇದು ನಿರಂತರವಾಗಿ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಡಾ.ಸತೀಶ್ ಕುಮಾರ್ ಮಾತನಾಡಿ, ಶಿವಕುಮಾರ್‌ನಾಯ್ಡು ಅವರು ಇತ್ತೀಚೆಗೆ ಬ್ರಿಗೇಡ್ ರಸ್ತೆಯಲ್ಲಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದ ಬೃಹತ್ ಬಿಲ್ಡರ್‌ವೊಬ್ಬರ ಹಗರಣ ಬಯಲಿಗೆಳೆದಿದ್ದರು.

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಶಾಸಕರು ಮತ್ತು ಅವರ ಬೆಂಬಲಿತ ಗೂಂಡಾಗಳು ಶಿವಕುಮಾರ್ ನಾಯ್ಡು ಅವರಿಗೆ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕದಂತೆ ಪೊಲೀಸರ ಮೇಲೆ ಹ್ಯಾರಿಸ್ ಒತ್ತಡ ಹಾಕುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರಿಗೂ ದೂರು ಸಲ್ಲಿಸಲಾಗಿದೆ. ಶಾಸಕರ ವಿರುದ್ದ ತಕ್ಷಣ ದೂರು ದಾಖಲಿಸಿಕೊಂಡು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಶಿವಕುಮಾರ್‌ನಾಯ್ಡು ಅವರಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com