
ಬೆಂಗಳೂರು: ಪೋಷಕರೊಂದಿಗೆ ದರ್ಗಾಗೆ ಬಂದಿದ್ದ 9 ವರ್ಷದಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿರುವ ದಾರುಮ ಘಟನೆ ರಾಮನಗರ ಹೊರವಲಯದ ಹಳ್ಳಿಮಾಳ ಸಮೀಪ ಸೋಮವಾರ ನಡೆದಿದೆ.
ಮೊಹಮ್ಮದ್ ಸೈಫ್ (9) ನೀರಿನಲ್ಲಿ ಕೊಚ್ಚಿಹೋದ ಬಾಲಕ. ಸೋಮವಾರ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಬೆಂಗಳೂರಿನ ಲಕ್ಕಸಂದ್ರದ ನಿವಾಸಿಗಳಾದ ರಿಯಾಜ್ ಮತ್ತು ಸಮೀಮ್ ಭಾನು ತಮ್ಮ ಪುತ್ರನ ಜೊತೆ ಬಂದಿದ್ದರು. ಈ ವೇಳೆ ಬಾಲಕ ಮೀನುಗಳಿಗೆ ಆಹಾರ ನೀಡುವಾಗ ತಾಲು ಜಾರಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ.
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಬಾಲಕ ಪತ್ತೆಯಾಗಲಿಲ್ಲ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದರು ಮಂಗಳವಾರ ಮತ್ತೆ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಮಧ್ಯಾಹ್ನ ಮೃತದೇಹವನ್ನು ಹೊರತೆಗೆದರು. ಇದೀಗ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ರಾಮನಗರ ಗ್ರಾಮಾಂತರ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Advertisement