
ಬೆಂಗಳೂರು: ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ಬುಧವಾರ ಹರಿದ ನೀಲಿ ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದ್ದು, ಅದರಲ್ಲಿ ಯುವತಿಯ ಶವ ಇದ್ದದ್ದು ಆತಂಕ ಮೂಡಿಸಿತ್ತು. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಹೊರಗೆ ಎಸೆದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
"ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ಕೇಸ್‌ನಲ್ಲಿ ತುಂಬಿದ್ದ ಶವವನ್ನು ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಮೃತದೇಹದ ಮೇಲೆ ನಮಗೆ ಯಾವುದೇ ಗುರುತಿನ ದಾಖಲೆಗಳು ಕಂಡುಬಂದಿಲ್ಲ ಮತ್ತು ಮಹಿಳೆಯ ಹೆಸರು, ವಯಸ್ಸು ಮತ್ತು ಅವರು ಎಲ್ಲಿಂದ ಬಂದವರು ಎಂಬ ವಿವರಗಳನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Advertisement