ಗೃಹ ಸಚಿವ ಪರಮೇಶ್ವರ್'ಗೆ ED ಶಾಕ್: ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ದಾಳಿ, ದಾಖಲೆಗಳ ಪರಿಶೀಲನೆ

ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಪರಮೇಶ್ವರ್
ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಪರಮೇಶ್ವರ್
Updated on

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದೆ. ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇಂದು ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com