ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ, ಕೊನೆಗೂ ಕ್ಷಮೆಯಾಚನೆ; ಸ್ಥಳೀಯ ಭಾಷೆ ತರಬೇತಿ ನೀಡಿ ಎಂದ ಸಿಎಂ ಸಿದ್ದರಾಮಯ್ಯ

ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್‌ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು.
Bank manager
ಬ್ಯಾಂಕ್ ಮ್ಯಾನೇಜರ್
Updated on

ಬೆಂಗಳೂರು: ಆನೇಕಲ್ ತಾಲ್ಲೂಕಿನ ಚಂದಾಪುರದ ಸೂರ್ಯನಗರ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿ ಕೊನೆಗೂ ಕ್ಷಮೆ ಕೇಳಿದ ಘಟನೆ ಬಳಿಕ ಇದೀಗ ಅವರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಏನಿದು ಘಟನೆ?

ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್‌ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು. ಈ ವರ್ತನೆಯಿಂದ ಬೇಸರವಾಗಿ, ಕೆಲಸದ ಅವಧಿಯಲ್ಲಿ ಸಿಬ್ಬಂದಿ ಏಕೆ ಕೌಂಟರ್‌ನಲ್ಲಿಲ್ಲ? ಇದನ್ನು ವ್ಯವಸ್ಥಾಪಕರ ಬಳಿ ಪ್ರಶ್ನಿಸುತ್ತೇನೆ ಎಂದು ಅವರ ಕೊಠಡಿ ಬಳಿ ಹೋದರು.

'ಸಮಯ 10.30 ಆದರೂ, ಸಿಬ್ಬಂದಿ ಇಲ್ಲ' ಎಂದು ಸೌಮ್ಯವಾಗಿಯೇ ವ್ಯವಸ್ಥಾಪಕರಲ್ಲಿ ಕೇಳಿಕೊಂಡರಂತೆ. ಅದಕ್ಕೆ ಮ್ಯಾನೇಜರ್ ನನಗೆ ಕನ್ನಡ ಗೊತ್ತಿಲ್ಲ. ಹಿಂದಿಯಲ್ಲಿ ಮಾತನಾಡು' ಎಂದು ಅತ್ಯಂತ ದರ್ಪದಿಂದ ಅವರು ಮಾತನಾಡಿದರಂತೆ. ಈ ನಾಡಿನ ಭಾಷೆ ಕನ್ನಡ, ಕನ್ನಡದಲ್ಲಿ ಸೇವೆ ಒದಗಿಸಬೇಕಾಗಿರುವುದು ಬ್ಯಾಂಕ್ ಕರ್ತವ್ಯ. ಈ ಬಗ್ಗೆ ಆದೇಶ ಮತ್ತು ನಿಯಮವಿದೆ ಎಂದು ಹೇಳಿದೆ. ಆಗ ಮತ್ತಷ್ಟು ಕೆರಳಿದ ಅವರು ದುರ್ವತನೆ ತೋರಲು ಆರಂಭಿಸಿದಾಗ ಫೇಸ್ ಬುಕ್‌ನಲ್ಲಿ ಲೈವ್ ಆರಂಭಿಸಿದ್ದಾಗಿ ಹೇಳಿದರು.

ಗ್ರಾಹಕರೊಬ್ಬರು ಕನ್ನಡದಲ್ಲಿ ಮಾತನಾಡಲು ಕೇಳಿಕೊಂಡಾಗ, ಮ್ಯಾನೇಜರ್ 'ನನಗೆ ಹಿಂದಿ ಮಾತ್ರ ಗೊತ್ತು, ಕನ್ನಡದಲ್ಲಿ ಮಾತನಾಡುವುದಿಲ್ಲ' ಎಂದು ದರ್ಪ ತೋರಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಾಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬ್ಯಾಂಕ್ ಗಳಲ್ಲಿ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಉದ್ಯೋಗಿಗಳು ಸೇವೆ ನೀಡುವುದನ್ನು ಕಡ್ಡಾಯಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಕ್ಷಮೆ ಕೇಳಿದ ಮ್ಯಾನೇಜರ್

ಘಟನೆ ವಿವಾದವಾಗುತ್ತಿದ್ದಂತೆ ಬ್ಯಾಂಕ್ ನ ಸಿಬ್ಬಂದಿಯ ಬಳಿ ಕನ್ನಡದಲ್ಲಿ ಹೇಳಿಸಿಕೊಂಡು ಮ್ಯಾನೇಜರ್ ಕ್ಷಮೆ ಕೇಳುತ್ತಿರುವ ವಿಡಿಯೊ ವೈರಲ್ ಆಗಿದ್ದು, ಇದು ಕ್ಷಮೆ ಕೇಳುವಾ ರೀತಿಯಾ ಎಂಬ ಅಭಿಪ್ರಾಯ ಕೇಳಿಬಂದಿದೆ.

ಭಾಷೆ ಮತ್ತು ಸಂಸ್ಕೃತಿ ತರಬೇತಿಯನ್ನು ಬ್ಯಾಂಕ್ ಸಿಬ್ಬಂದಿಗೆ ನೀಡಿ

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ ಬಿಐ ಬ್ಯಾಂಕ್ ಮ್ಯಾನೇಜರ್ ಅವರ ನಡತೆ ಸ್ವೀಕಾರಾರ್ಹವಲ್ಲ, ಇಂತಹ ವರ್ತನೆ ಖಂಡನೀಯ, ಅವರನ್ನು ತಕ್ಷಣವೇ ವರ್ಗಾಯಿಸಿ ಕ್ರಮ ತೆಗೆದುಕೊಂಡ ಎಸ್ ಬಿಐ ಕ್ರಮ ಶ್ಲಾಘನೀಯವಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಬ್ಯಾಂಕ್ ಸಿಬ್ಬಂದಿ ಗ್ರಾಹಕರನ್ನು ಗೌರವದಿಂದ ನಡೆಸಿಕೊಳ್ಳಬೇಕು, ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು.

ಈ ನಿಟ್ಟಿನಲ್ಲಿ ಹಣಕಾಸು ಸಚಿವರು ಮತ್ತು ಹಣಕಾಸು ಸೇವೆಗಳ ಇಲಾಖೆ ಕ್ರಮ ಕೈಗೊಂಡು ಭಾಷೆ ಮತ್ತು ಸಂಸ್ಕೃತಿಯ ಸೂಕ್ಷ್ಮತೆಯನ್ನು ಬ್ಯಾಂಕ್ ಸಿಬ್ಬಂದಿ ಅರ್ಥಮಾಡಿಕೊಳ್ಳಲು ಎಲ್ಲಾ ಸಿಬ್ಬಂದಿಗೆ ಆಯಾ ರಾಜ್ಯಗಳ ಸ್ಥಳೀಯ ಭಾಷೆ ಬಗ್ಗೆ ತರಬೇತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com