
ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಿಂದ ಪಾರಾಗಿದ್ದ ವೃದ್ಧ ವ್ಯಕ್ತಿಯೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆಯಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
2024ರ ಜುಲೈ 16 ರಂದು ಅಂಕೋಲದ ಶಿರೂರಿನಲ್ಲಿ ಭೂ ಕುಸಿತವಾಗಿ ಇದರ ಮಣ್ಣು ಗಂಗಾವಳಿ ನದಿಗೆ ಬಿದ್ದು ಪಕ್ಕದಲ್ಲಿದ್ದ ಉಳವರೆ ಗ್ರಾಮಕ್ಕೆ ನದಿ ನೀರು ಅಪ್ಪಳಿಸಿತ್ತು. ಈ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು.
ದುರಂತದಲ್ಲಿ ಸ್ಪಲ್ಪದರಲ್ಲೇ ತಮ್ಮಣ್ಣಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರಕೃತಿ ವಿಕೋಪದಲ್ಲಿ ಬೀಸುವ ದೊಣ್ಣೆಯಿಂದ ಪಾರಾಗಿ ಜೀವ ಉಳಿಸಿಕೊಂಡಿದ್ದ ಅವರು, ಇದೀಗ ಮತ್ತೆ ಪ್ರಕೃತಿ ವಿಕೋಪಕ್ಕೆ ಬಲಿಯಾಗಿದ್ದಾರೆ.
Advertisement