ನಗರದಲ್ಲಿ ಡೆಂಗ್ಯೂ ತಡೆಗೆ ಸರ್ಕಾರ ಸಜ್ಜು: 240 ಆರೋಗ್ಯ ನಿರೀಕ್ಷಕರು, 700 ಸ್ವಯಂಸೇವಕರ ನೇಮಕ

ಬುಧವಾರ ನಗರದ ಪುರಭವನದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
Updated on

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದು, ನಗರದಲ್ಲಿ ಡೆಂಗ್ಯೂ ತಡೆಗಟ್ಟಲು ಈ ಬಾರಿ ಹೆಚ್ವಿನ ಮುನ್ನೆಚ್ಚರಿಕೆ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನ ನೇಮಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದರು.

ಬುಧವಾರ ನಗರದ ಪುರಭವನದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

ಬೆಂಗಳೂರಿನಲ್ಲಿಯೇ ಶೇ.40ರಿಂದ 50ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯತೆ ನೀಡಬೇಕಾಗಿದೆ. ಜನರು ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಜವಾಬ್ದಾರಿಯನ್ನು ವಹಿಸಿಕೊಂಡಾಗ ಮಾತ್ರ ನಾವು ನಿಜವಾಗಿಯೂ ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದು ಹೇಳಿದರು.

ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಗ್ಯೂ ತರುವ ಸೊಳ್ಳಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ ಎಂದು ತಿಳಿಸಿದರು.

ಬೆಂಗಳೂರನ್ನು ಡೆಂಗ್ಯೂ ಮುಕ್ತ ನಗರವನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಸ್ವಯಂಸೇವಕರು, ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿ ಆರೋಗ್ಯಕರ ನಗರವನ್ನು ನಿರ್ಮಿಸಲು ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಇದೇ ವೇಳೆ ಸಚಿವರು ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ಮನೆ-ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ನೀರಿನ ಘಟಕಗಳು, ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಮನೆಯ ಬಳಿಯ ಹಳೆಯ ಟೈರ್‌ಗಳು, ತೆಂಗಿನ ಚಿಪ್ಪುಗಳಲ್ಲಿ ಈಡಿಸ್ ಸೊಳ್ಳೆ ಲಾವಾ ಉತ್ಪಾದಿಸಲು ತಾಣವಾಗಿಸಿಕೊಳ್ಳುತ್ತದೆ. ಸಾಧ್ಯವಾದಷ್ಟು ಈ ಎಲ್ಲಾ ತಾಣಗಳ ಶುಚಿತ್ವ ಕಾಪಾಡಿಕೊಳ್ಳಬೇಕು. ಸ್ವಚ್ಛತೆಯಿಂದ ಡೆಂಗಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಮೊದಲು ನಮ್ಮ ಮನೆ ಸುತ್ತಾಮುತ್ತಾ ಪ್ರದೇಶಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.
ಡೆಂಗ್ಯೂ-ಚಿಕನ್ ಗುನ್ಯಾ ನಿಯಂತ್ರಣಕ್ಕೆ ಈಗಿನಿಂದಲೇ ಕ್ರಮವಹಿಸಿ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com