ರಾಮನಗರದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ಬಹಿಷ್ಕಾರ; ದಿನಸಿ-ಕೆಲಸ ಕೊಡದಂತೆ ಡಂಗೂರ!

ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಾಡಿನಲ್ಲಿ ಅಸ್ಪೃಶ್ಯತೆ ಪಿಡುಗು ಇನ್ನೂ ದೂರವಾಗಿಲ್ಲ. ರಾಮನಗರ ಜಿಲ್ಲೆಯಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತವಾಗಿದ್ದು, ಇದಕ್ಕೆ ಮತ್ತೊಂದು ಉದಾಹರಣೆ ಸಾಕ್ಷಿಯಾಗಿದೆ. ಗ್ರಾಮದ ಮಾರಮ್ಮನ ಹಬ್ಬದಲ್ಲಿ ಭಾಗವಹಿಸಲು ತಮಗೂ ಸಮಾನ ಅವಕಾಶ ನೀಡಬೇಕು ಎಂದು ಕೇಳಿದ ತಾಲ್ಲೂಕಿನ ಬನವಾಸಿ ಗ್ರಾಮದ ದಲಿತರಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆಯೊಂದು ವರದಿಯಾಗಿದೆ.

ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮದ ಮಾರಮ್ಮನ ಹಬ್ಬದಲ್ಲಿ ಭಾಗವಹಿಸಲು ತಮಗೂ ಸಮಾನ ಅವಕಾಶ ನೀಡಬೇಕು ಎಂದು ಕೇಳಿದ ಹಿನ್ನೆಲೆಯಲ್ಲಿ ದಲಿತರಿಗೆ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆನ್ನಲಾಗಿದೆ.

ಅಲ್ಲದೆ, ಗ್ರಾಮದ ಅಂಗಡಿಗಳಲ್ಲಿ ದಲಿತರಿಗೆ ದಿನಸಿ ಸಾಮಾನು ಕೊಡಬಾರದು, ಡೇರಿಗಳಲ್ಲಿ ಹಾಲು ಹಾಕಿಸಿಕೊಳ್ಳಬಾರದು ಮತ್ತು ನೀಡಬಾರದು, ಶುದ್ಧ ಕುಡಿಯುವ ನೀರು ಮುಟ್ಟಲು ಬಿಡಬಾರದು ಹಾಗೂ ಕೃಷಿ ಕೆಲಸಗಳಿಗೆ ದಲಿತರನ್ನು ಕರೆಯಬಾರದು, ನಿಯಮ ಉಲ್ಲಂಘಿಸಿದವರು ರೂ.10 ಸಾವಿರ ದಂಡ ಕಟ್ಟಬೇಕು ಎಂದು ಗ್ರಾಮದಲ್ಲಿ ಡಂಗೂರ ಸಾರಿಸಿದ್ದಾರೆಂದು ಹೇಳಲಾಗುತ್ತಿದೆ.

ಹಬ್ಬ ಆಚರಣೆ ಕುರಿತು ಬನವಾಸಿ, ಜುಟ್ಟೇಗೌಡನವಲಸೆ ಹಾಗೂ ವಡೇರಹಳ್ಳಿ ಗ್ರಾಮದ ಮುಖಂಡರ ಸಭೆ ನಡೆದಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಸವರ್ಣೀಯ ಮುಖಂಡರು, ‘ಹಿಂದಿನಿಂದ ನಡೆದುಕೊಂಡು ಬಂದಿರುವಂತೆ ದಲಿತರು ಹಬ್ಬದಲ್ಲಿ ಭಾಗವಹಿಸಬಾರದು’ ಎಂದು ತಾಕೀತು ಮಾಡಿದ್ದರು. ಇದಕ್ಕೆ ಆಕ್ಷೇಪಿಸಿದ್ದ ದಲಿತರು, ‘ಹೀಗೆ ಹೇಳುವುದು ಕಾನೂನಿಗೆ ವಿರುದ್ಧವಾಗುತ್ತದೆ. ನಾವು ಸಹ ನಿಮ್ಮೊಂದಿಗೆ ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡಿ’ ಎಂದಿದ್ದರು.

ಇದರಿಂದ ಕೆರಳಿದ ಸವರ್ಣೀಯರು ಸಭೆಯಲ್ಲಿ ದಲಿತರನ್ನು ನಿಂದಿಸಿದ್ದರು. ಇದರಿಂದ ನೊಂದ ದಲಿತರು ಸಭೆಯಿಂದ ಹೊರನಡೆದಿದ್ದರು.

ಸಭೆ ಮುಗಿದ ಬಳಿಕ ಮೂರು ಗ್ರಾಮಗಳ ಸವರ್ಣೀಯ ಮುಖಂಡರು, ಬನವಾಸಿಯ 12 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಬಳಿಕ ದಲಿತರು ನಾಯಕರು ಈ ವಿಷಯವನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ನಂತರ, ಸಮಾಜ ಕಲ್ಯಾಣ ಇಲಾಖೆ, ಪೊಲೀಸರು ಮತ್ತು ತಹಶೀಲ್ದಾರ್ ಅಧಿಕಾರಿಗಳು ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸಿದರು. ಆದರೆ, ಗ್ರಾಮಸ್ಥರು ಔಪಚಾರಿಕ ದೂರು ದಾಖಲಿಸಲು ನಿರಾಕರಿಸಿದ್ದಾರೆಂದು ಅಧಿಕಾರಿ ಹೇಳಿದರು.

ಸಂಗ್ರಹ ಚಿತ್ರ
ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಹೋಟೆಲ್‌ನಲ್ಲಿ ದಲಿತರಿಗೆ ಊಟ ಕೊಡದ ಮಾಲೀಕ, ಬಂಧನ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com