ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮರದ ಕೊಂಬೆ ಬಿದ್ದು ಎಲೆಕ್ಟ್ರಿಷಿಯನ್ ಸಾವು, ಮತ್ತೋರ್ವನಿಗೆ ಗಾಯ

ಗಿರಿಯಪ್ಪ ಮತ್ತು ರಮೇಶ್ ಕೋರಮಂಗಲ 5ನೇ ಬ್ಲಾಕ್‌ ರಸ್ತೆಯಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮರದ ಕೊಂಬೆ ಗಿರಿಯಪ್ಪ ಅವರ ತಲೆಯ ಮೇಲೆ ಬಿದ್ದಿದೆ.
Published on

ಬೆಂಗಳೂರು: ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುು ಘಟನೆ ಕೋರಮಂಗಲದ ಪ್ರಿಂಟೊ ಜಂಕ್ಷನ್ ಬಳಿಯ 60 ಅಡಿ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಮೃತನನ್ನು ಮೂಡಲ ಗಿರಿಯಪ್ಪ (48) ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ರಮೇಶ್ ಎಂದು ಗುರ್ತಿಸಲಾಗಿದೆ. ಇಬ್ಬರೂ ಆಡುಗೋಡಿಯ ನಿವಾಸಿಗಳಾಗಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಧ್ಯಾಹ್ನ 2.45 ರ ಸುಮಾರಿಗೆ ಗಿರಿಯಪ್ಪ ಮತ್ತು ರಮೇಶ್ ಕೋರಮಂಗಲ 5ನೇ ಬ್ಲಾಕ್‌ ರಸ್ತೆಯಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮರದ ಕೊಂಬೆ ಗಿರಿಯಪ್ಪ ಅವರ ತಲೆಯ ಮೇಲೆ ಬಿದ್ದಿದ್ದು, ಈ ವೇಳೆ ಗಿರಿಯಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳು ರಮೇಶ್ ಅವರನ್ನು ರಕ್ಷಿಸಿದ್ದು, ಸ್ಥಳೀಯ ಆಸ್ಪತ್ರೆ ದಾಖಲಿಸಿದ್ದಾರೆ.

ರಮೇಶ್ ನೀಡಿದ ದೂರಿನ ಆಧಾರದ ಮೇಲೆ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಸಂಗ್ರಹ ಚಿತ್ರ
ತುಮಕೂರು: ರಾಸಾಯನಿಕ ಕಾರ್ಖಾನೆಯಲ್ಲಿ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು

X
Open in App

Advertisement

X
Kannada Prabha
www.kannadaprabha.com