ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ: ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗ, ಘಟನೆ ಸಂಬಂಧ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಮನವಿ ಪತ್ರ ಸಲ್ಲಿಸಿದರು.
 ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ
ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ
Updated on

ಬೆಂಗಳೂರು: ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು ನಡೆಸಿರುವ ದಿಗ್ಬಂಧನ ಹಾಗೂ ಹಲ್ಲೆ ಯತ್ನಕ್ಕೆ ಬಿಜೆಪಿ ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ಅವರನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗ, ಘಟನೆ ಸಂಬಂಧ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ಚಲುವಾದಿ ನಾರಾಯಣಸ್ವಾಮಿ, ರವಿಕುಮಾರ್, ಅಶ್ವತ್ಥ್​​ ನಾರಾಯಣ ಸೇರಿದಂತೆ ಇತರರು ಇದ್ದರು.

ನಾರಾಯಣಸ್ವಾಮಿ ಅವರನ್ನು ಚಿತ್ತಾಪುರ ಬಂಗಲೆಯಲ್ಲಿಮರಳು ಮಾಫಿಯಾದೊಂದಿಗೆ ಸಂಬಂಧ ಹೊಂದಿರುವವರು ಸೇರಿದಂತೆ ಕೆಲ ವ್ಯಕ್ತಿಗಳು ಕಾನೂನುಬಾಹಿರವಾಗಿ ಐದು ಗಂಟೆಗಳಿಗೂ ಹೆಚ್ಚು ಕಾಲ ಬಂಧನದಲ್ಲಿಟ್ಟುಕೊಂಡಿದ್ದಾರೆ. ದಾಳಿಕೋರರು ಬಲವಂತವಾಗಿ ಆವರಣಕ್ಕೆ ಬೀಗ ಹಾಕಿದರು, ದೈಹಿಕವಾಗಿ ದಾಳಿ ಮಾಡಲು ಪ್ರಯತ್ನಿಸಿದ್ದು, ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಿಜೆಪಿಯ ಇತರ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.

ಸ್ಥಳದಲ್ಲಿ ಪೊಲೀಸರಿದ್ದರೂ ಮೌನ ಪ್ರೇಕ್ಷಕರಾಗಿದ್ದಾರೆ. ಗಣ್ಯರನ್ನು ರಕ್ಷಿಸಲು ಮಧ್ಯಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ ಎಂದು. "ಇಡೀ ಜಿಲ್ಲಾ ಪೊಲೀಸ್ ಪಡೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆಗಳನ್ನು ಪಾಲಿಸುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಆರೋಪಿಸಿದೆ.

 ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ
ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಕಾರಿಗೆ ಬಣ್ಣ ಎರಚಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, BJP ಖಂಡನೆ

ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಕಿಕ್ರಿಯಿಸಿದ ಅಶೋಕ್ ಅವರು,ನಾರಾಯಣಸ್ವಾಮಿ ಮೇಲಿನ ದಾಳಿಗೆ ಪ್ರಿಯಾಂಕ್ ಖರ್ಗೆ ಕಾರಣ ಎಂದು ರಾಜ್ಯಪಾಲರಿಗೆ ತಿಳಿಸಿರುವುದಾಗಿ ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಕೊಟ್ಟವರು ಯಾರು? ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ. ನಾರಾಯಣಸ್ವಾಮಿಗೆ ಸೂಕ್ತ ರಕ್ಷಣೆ ನೀಡುವಂತೆ ಹಾಗೂ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ನಾರಾಯಣಸ್ವಾಮಿ ಅವರ ಜೀವಕ್ಕೆ ಬೆದರಿಕೆ ಇದೆ. ಅವರಿಗೆ ಏನಾದರೂ ಆದರೆ ಅದಕ್ಕೆ ರಾಜ್ಯ ಸರ್ಕಾರ ಮತ್ತು ಪ್ರಿಯಾಂಕ್ ಅವರ ಪ್ರಚೋದನೆಯೇ ಕಾರಣ. ಅವರ ಭದ್ರತೆಯನ್ನು ಹೆಚ್ಚಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಬಿಜೆಪಿ ನಾಯಕ ಎನ್. ರವಿ ಕುಮಾರ್ ಅವರು ಮಾತನಾಡಿ, ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ ಅವರ ಸರ್ವಾಧಿಕಾರದಲ್ಲಿದೆ. ಕಾಂಗ್ರೆಸ್ ಕಾರ್ಯಕರ್ತರು ತಾವು ಮಾಡಿದ್ದೇ ಕಾನೂನು ಎಂದುಕೊಂಡಿದ್ದಾರೆ. ಪೊಲೀಸರು ಅಸಹಾಯಕರಾಗಿದ್ದಾರೆಂದು ಕಿಡಿಕಾರಿದರು.

ಇದೇ ವೇಳೆ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ. ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿಯವರು, ನೂರಕ್ಕೂ ಹೆಚ್ಚು ಗೂಂಡಾಗಳು ಸೇರಿ ನನಗೆ ಮಾರಣಾಂತಿಕ ಹಲ್ಲೆ ಮಾಡಲು ಮುಂದಾಗಿದ್ದರು. ನಮ್ಮ ಮಾಜಿ ಜಿಲ್ಲಾಧ್ಯಕ್ಷರ ಮೇಲೆ ಹಲ್ಲೆ ಮಾಡಿ 3 ಗಂಟೆ ವರೆಗೆ ಕೂಡಿ ಹಾಕಿದ್ದಾರೆ. ನಾನು ಅಮಿತ್ ಶಾ ಅವರಿಗೂ ಪತ್ರ ಬರೆಯುತ್ತೇನೆ. ತಕ್ಷಣ ಪ್ರಿಯಾಂಕ್ ಖರ್ಗೆಯವರನ್ನು ಸಿಎಂ ಸಂಪುಟದಿಂದ ಹೊರಗೆ ಹಾಕಬೇಕು. ನನಗೆ ಪ್ರಿಯಾಂಕ್ ಖರ್ಗೆಯಿಂದ ಪ್ರಾಣ ಬೆದರಿಕೆ ಇದೆ. ನನ್ನ ಪ್ರಾಣಕ್ಕೆ ಏನಾದರೂ ಆದ್ರೆ ಪ್ರಿಯಾಂಕ್ ಕಾರಣ. ನನ್ನನ್ನು ಮುಗಿಸುವ ಸಂಚು ಮಾಡಿದ್ದಾರೆ. ಅವರ ಸೈಟ್ ಪ್ರಕರಣ ಬಯಲಿಗೆ ತಂದ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ಸಿದ್ದರಾಮಯ್ಯ ಕಾರಿಗೆ ಕೊಡಗಿನಲ್ಲಿ ಮೊಟ್ಟೆ ಬಿಸಾಕಿದಾಗ ಅವರು ಎಷ್ಟು ಮಾತಾಡಲಿಲ್ಲ? ಈಗ ಸಿದ್ದರಾಮಯ್ಯ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com