
ಬೆಂಗಳೂರು: ಸಂಸ್ಧೆಯಲ್ಲಿ ವೇತನ ತಾರತಮ್ಯ ನಡೆಯುತ್ತಿದ್ದು, ಭ್ರಷ್ಟಾಚಾರ ತಾರಕಕ್ಕೇರಿದೆ ಎಂದು ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್)ದ ಮಾರ್ಕೆಟಿಂಗ್ ಸಿಬ್ಬಂದಿ ಮತ್ತು ಕಾರ್ಮಿಕರ ಸಂಘವು ಆರೋಪ ಮಾಡಿದ್ದು, ಸಿಐಡಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತುನಾಡಿದ ಸಂಘದ ಅಧ್ಯಕ್ಷ ಜಿ.ಆರ್. ಶಿವಶಂಕರ್ ಅವರು, 25 ವರ್ಷಗಳಿಗೂ ಹೆಚ್ಚು ಕಾಲ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅನೇಕ ಗುತ್ತಿಗೆ ಕಾರ್ಮಿಕರು 20,000 ರಿಂದ 30,000 ರೂ.ಗಳವರೆಗಿನ ಅಲ್ಪ ವೇತನವನ್ನು ಪಡೆಯುತ್ತಿದ್ದಾರೆ, ವೇತನ ಹೆಚ್ಚಳ ಅಥವಾ ಕಾನೂನುಬದ್ಧವಾಗಿ ಬೋನಸ್‌ಗಳನ್ನು ನೀಡಲಾಗುತ್ತಿಲ್ಲ. ಆದರೆ, ಹೊಸದಾಗಿ ನೇಮಕಗೊಂಡ ಗುತ್ತಿಗೆ ಸಿಬ್ಬಂದಿಗೆ 1.5 ಲಕ್ಷ ರೂ.ಗಳವರೆಗೆ ವೇತನವನ್ನು ಪಾವತಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಲಾಗುತ್ತಿದೆ. ಇದರ ಹೊರತಾಗಿ ಹೊಸ ಒಪ್ಪಂದ ಪತ್ರಗಳಿಗೆ ಸಹಿ ಹಾಕುವಂತೆ ಕಾರ್ಮಿಕರ ಮೇಲೆ ಆಡಳಿತ ಮಂಡಳಿ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಸಂಸ್ಥೆಯಲ್ಲಿ ಭ್ರಷ್ಟಾಚಾರವೂ ತಾರಕಕ್ಕೇರಿದೆ ಎಂದ ಅವರು, ಶ್ರೀಗಂಧದ ಎಣ್ಣೆಯಂತಹ ಕಚ್ಚಾ ವಸ್ತುಗಳ ಖರೀದಿಸುವಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಉನ್ನತ ಅಧಿಕಾರಿಗಳೂ ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ.
ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ಸೂಕ್ತ ತನಿಖೆಗೆ ಆದೇಶಿಸುವಂತೆ ಮತ್ತು ದೀರ್ಘಕಾಲದಿಂದ ಕೆಲಸ ಮಾಡುತ್ತಿರುವವರಿಗೆ ಶಾಶ್ವತ ಉದ್ಯೋಗ ಮತ್ತು ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರ
Advertisement