ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ಲೋಕಾಯುಕ್ತ ಭೇಟಿ; ಅಧಿಕಾರಿಗಳ ವಿರುದ್ಧ ಗರಂ, ಸ್ವಯಂಪ್ರೇರಿತ ಪ್ರಕರಣ ದಾಖಲು

ಮಳೆಯಿಂದ ಹಾನಿಗೊಳಗಾದ ನಿವಾಸಿಗಳ ಸಂಕಷ್ಟಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Lokayukta Justice BS Patil and Upa Lokayuktas justices KN Phaneendra and B Veerappa inspect flood-affected areas of the city on Thursday.
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರು ಗುರುವಾರ ನಗರದ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು.Photo | Express
Updated on

ಬೆಂಗಳೂರು: ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ, ನ್ಯಾ.ಬಿ.ವೀರಪ್ಪ ಅವರು ಗುರುವಾರ ಭೇಟಿ ನೀಡಿದ್ದು, ಅವ್ಯವಸ್ಥೆಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆದರು.

ಮಳೆಯಿಂದ ಹಾನಿಗೊಳಗಾದ ನಿವಾಸಿಗಳ ಸಂಕಷ್ಟಗಳನ್ನು ಪರಿಶೀಲಿಸಿದ ಲೋಕಾಯುಕ್ತರು, ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದೇ ವೇಳೆ ಶುಕ್ರವಾರ ಮಧ್ಯಾಹ್ನ 12.30 ಕ್ಕೆ ಅಧಿಕಾರಿಗಳೊಂದಿಗೆ ಸಾರ್ವಜನಿಕ ಸಭೆಯನ್ನು ಕರೆದಿದ್ದು, ಆಸಕ್ತರು ಸಭೆಯಲ್ಲಿ ಭಾಗವಹಿಸಬಹುದಾಗಿದೆ.

ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ನಗರದ ಸಿಲ್ಡ್‌ಬೋರ್ಡ್, ಪಣತ್ತೂರು ರೈಲ್ವೆ ಸೇತುವೆ, ಸಾಯಿ ಲೇಔಟ್, ಮಾನ್ಯತಾ ಟೆಕ್ ಪಾರ್ಕ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು. ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ನೀರುಗಾಲುವೆಯಲ್ಲಿ ನೀರು ಹರಿಯದೆ ಸ್ಥಗಿತಗೊಂಡಿರುವುದನ್ನು ಕಂಡು ಸ್ಥಳದಲ್ಲಿದ್ದ ಬಿಎಂಆರ್‌ಸಿಎಲ್ ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎರಡು ಸಂಸ್ಥೆಗಳ ಮುಖ್ಯ ಎಂಜಿನಿಯರ್‌ಗಳನ್ನು ವಿಚಾರಣೆ ನಡೆಸಿದರು. ಈ ವೇಳೆ ಅವರು ನೀಡಿದ ವಿವರಣೆಯಿಂದಾಗಿ ಸಮಾಧಾನಗೊಳ್ಳದ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಶುಕ್ರವಾರ ಈ ಬಗ್ಗೆ ವಿಕೃತವಾದ ವರದಿಯೊಂದಿಗೆ ಹಾಜರಾಗಿ ವಿವರಣೆ ನೀಡುವಂತೆ ಸೂಚನೆ ನೀಡಿದರು.

Lokayukta Justice BS Patil and Upa Lokayuktas justices KN Phaneendra and B Veerappa inspect flood-affected areas of the city on Thursday.
ಬೆಂಗಳೂರು ಮಳೆ ಅವಾಂತರ: ಸಂತ್ರಸ್ತರಿಗೆ ತಕ್ಷಣ ಪರಿಹಾರ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಇದೇ ವೇಳೆ ಮಳೆ ನೀರು ನಿಲ್ಲದಂತೆ ಕೈಗೊಳ್ಳುವ ರಿಹಾರಗಳ ಕುರಿತು ಮಾಹಿತಿ ನೀಡುವಂತೆಯೂ ತಿಳಿಸಲಾಯಿತು.

ಬಳಿಕ ಪಣತ್ತೂರುಗೆ ತೆರಳಿದ ಲೋಕಾಯುಕ್ತರು, ಉಪ ಲೋಕಾಯುಕ್ತರು ಪಣತ್ತೂರು ಮುಖ್ಯರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯ ಬಳಿ ಜಲಾವೃತವನ್ನು ಕಂಡು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಹೆಣ್ಣೂರು ಬಳಿಯ ಸಾಯಿ ಬಡಾವಣೆಗೆ ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯ ನಿವಾಸಿಗಳು ತಮ್ಮ ಅಹವಾಲನ್ನು ಮುಂದಿಟ್ಟರು. ಈ ವೇಳೆ ಮನೆಗಳಿಗೆ ನೀರು ನುಗ್ಗಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿರುವುದು ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು. ಜನರು ಸಹ ತಮ್ಮ ಸಂಕಷ್ಟದ ಬಗ್ಗೆ ವಿವರಿಸಿದರು.

3 ದಿನಗಳಿಂದ ವಿದ್ಯುಚ್ಛಕ್ತಿ ಸಂಪರ್ಕ ಕಡಿತಗೊಳಿಸಲಾಗಿದ್ದು, ಪ್ರತಿ ಬಾರಿ ಮಳೆ ಬಂದರೆ ಈ ಸಮಸ್ಯೆ ತಲೆದೋರುತ್ತದೆ. ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಜನರ ಸಮಸ್ಯೆಗಳನ್ನು ಆಲಿಸಿದ ಲೋಕಾಯುಕ್ತ, ಉಪ ಲೋಕಾಯುಕ್ತರು ಶುಕ್ರವಾರ ವಿಚಾರಣೆಗೆ ಹಾಜರಾಗಿ ವಿಸ್ತೃತ ವರದಿ ನೀಡಬೇಕು. ಸಾರ್ವಜನಿಕರು ಸಹ ಹಾಜರಾಗಿ ಅಹವಾಲು ಸಲ್ಲಿಸುವಂತೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com