ಮಂಗಳೂರು: ಹೆಂಡತಿ ಜೊತೆ ಕಿರಿಕ್; ಸಂಧಾನಕ್ಕೆ ಬಂದಿದ್ದ ಮ್ಯಾರೇಜ್ ಬ್ರೋಕರ್ ಬರ್ಬರ ಹತ್ಯೆ

ಮುರಿದ ಮದುವೆ ಬಗ್ಗೆ ಮಾತುಕತೆ ನಡೆಸಿ ವಿಚಾರ ಬಗೆಹರಿಸಲು ಸುಲೇಮಾನ್ ತಮ್ಮ ಇಬ್ಬರು ಪುತ್ರರ ಜೊತೆ ಮುಸ್ತಾಫಾನ ಮನೆಗೆ ಗುರುವಾರ ರಾತ್ರಿ ತೆರಳಿದ್ದರು. ಮಾತುಕತೆ ಫಲಪ್ರದವಾಗಿರಲಿಲ್ಲ.
Casual image
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಅವರ ಸಂಬಂಧಿಕನೇ ಚೂರಿಯಿಂದ ಇರಿದಿದ್ದು, ಗಾಯಾಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಯ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ.

ಮೃತರನ್ನು ವಾಮಂಜೂರಿನ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಅವರ ಇಬ್ಬರು ಪುತ್ರರಾದ ರಿಯಾಬ್ ಹಾಗೂ ಶಿಯಾಬ್ ಕೂಡ ಗಾಯಗೊಂಡವರು. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಅರೋಪಿ. ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಕೊಲೆಯಾದ ಸುಲೈಮಾನ್, ಸಂಬಂಧಿ ಮುಸ್ತಫಾನ ಮದುವೆ ನೆರವೇರಿಸಿದ್ದರು. ದಂಪತಿ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಚಾರವಾಗಿ ಮಾತುಕತೆ ನಡೆಸಲು ಸುಲೈಮಾನ್, ತನ್ನ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಜೊತೆಗೆ ಬಂದಿದ್ದರು. ಈ ವೇಳೆ ಮುಸ್ತಫಾ ಚಾಕು ಇರಿದಿದ್ದಾನೆ. ಷಾಹಿನಾಜ್ ಎಂಬ ಯುವತಿಯನ್ನು ಮುಸ್ತಾಫಾ ಎಂಟು ತಿಂಗಳ ಹಿಂದೆ ಮದುವೆಯಾಗಿದ್ದ. ದಂಪತಿ ನಡುವೆ ಮನಃಸ್ತಾಪ ಉಂಟಾಗಿದ್ದು, ಷಾಹಿನಾಜ್ ಎರಡು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದು, ಬಳಿಕ ಗಂಡನ ಮನೆಗೆ ಮರಳಿರಲಿಲ್ಲ. ಇದರಿಂದ ಸಿಟ್ಟಿಗೆದ್ದಿದ್ದ ಮುಸ್ತಾಫಾ ಸುಲೇಮಾನ್ ಗೆ ಗುರುವಾರ ರಾತ್ರಿ ಕರೆ ಮಾಡಿ ಅವಾಚ್ಯವಾಗಿ ಬೈದಿದ್ದ' ಎಂದು ಪೊಲೀಸರು ಹೇಳಿದ್ದಾರೆ.

Casual image
ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: FSL ವರದಿಯಲ್ಲಿ ಅಂಶ ಬಯಲು!

ಮುರಿದ ಮದುವೆ ಬಗ್ಗೆ ಮಾತುಕತೆ ನಡೆಸಿ ವಿಚಾರ ಬಗೆಹರಿಸಲು ಸುಲೇಮಾನ್ ತಮ್ಮ ಇಬ್ಬರು ಪುತ್ರರ ಜೊತೆ ಮುಸ್ತಾಫಾನ ಮನೆಗೆ ಗುರುವಾರ ರಾತ್ರಿ ತೆರಳಿದ್ದರು. ಮಾತುಕತೆ ಫಲಪ್ರದವಾಗಿರಲಿಲ್ಲ. ಮನೆಯಿಂದ ಹೊರಡುವಂತೆ ಮುಸ್ತಾಫಾ ಅವರಿಗೆ ಸೂಚಿಸಿದ್ದ. ಬಳಿಕ ಏಕಾಏಕಿ ಸಿಟ್ಟಾದ ಆತ ಮನೆಯಲ್ಲಿದ್ದ ಚೂರಿ ತಂದು ಸುಲೆಮಾನ್ ಅವರ ಕುತ್ತಿಗೆಗೆ ಇರಿದಿದ್ದ. ಗಾಯಗೊಂಡ‌ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎಂದು ತಿಳಿಸಿದ್ದಾರೆ.

ತಡೆಯಲು ಬಂದ ಶಿಯಾಬ್ ಎದೆಯ ಎಡಭಾಗಕ್ಕೆ ಹಾಗೂ ರಿಯಾಬ್ ಅವರ ಬಲ ತೋಳಿಗೂ ಚೂರಿಯಿಂದ ಹಲ್ಲೆ ಮಾಡಿದ್ದು ಅವರಿಬ್ಬರೂ ಗಾಯಗೊಂಡಿದ್ದರು. ಮೂವರು ಗಾಯಾಳುಗಳನ್ನು ಸ್ಥಳೀಯರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಜನಪ್ರಿಯ ಆಸ್ಪತ್ರೆಗೆ ಕರೆದೊಯ್ದಿದ್ದರು‌. ಸುಲೆಮಾನ್ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಿಯಾಬ್ ಹಾಗೂ ರಿಯಾಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com