ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ ಸರ್ಕಾರ ತಾನು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ರೂ.5,300 ಕೋಟಿ ಅನುದಾನವನ್ನು ನೀಡಲಿಲ್ಲ. ನೀರಾವರಿ ಯೋಜನೆಗಳಿಗೆ ಸಹಾಯ ಮಾಡಲಿಲ್ಲ. ಆದರೂ ನಮ್ಮ ರಾಜ್ಯದ ಅಭಿವೃದ್ಧಿ ನಿಮ್ಮ ಸರ್ಕಾರದ ಗುರಿ.
DK Shivakumar
ಡಿಕೆ ಶಿವಕುಮಾರ್ online desk
Updated on

ವಿಜಯಪುರ: "ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಕೊಲ್ಹಾರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದ ಡಿಕೆ ಶಿವಕುಮಾರ್, "ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಎತ್ತರಿಸಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಈ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ. ಇತ್ತೀಚೆಗೆ ನಾನು ಹಾಗೂ ಸಿಎಂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಅಧಿಸೂಚನೆ ಹೊರಡಿಸಲು ಒತ್ತಡ ಹಾಕಿದ್ದೇವೆ. ಇದಕ್ಕಾಗಿ ಕೇಂದ್ರ ಸಚಿವರು ಸಭೆಯನ್ನು ಕರೆದಿದ್ದರು. ಆದರೆ ಕಾರಣಾಂತರಗಳಿಂದ ಅದನ್ನು ಮುಂದಕ್ಕೆ ಹಾಕಲಾಗಿದೆ" ಎಂದು ಮಾಹಿತಿ ನೀಡಿದರು.

"ಮಂಡ್ಯ ನಂತರ ಈ ಭಾಗದ ಜಿಲ್ಲೆಗಳು ಸಕ್ಕರೆ ನಾಡಾಗಿ ಮಾರ್ಪಟ್ಟಿವೆ. ಈ ಭಾಗದ ರೈತರ ಬದುಕು ಹಸನಾಗಿಸಲು ನಾವು ಬದ್ಧರಾಗಿದ್ದೇವೆ. ಈ ಭಾಗದಲ್ಲಿ ಕಾರ್ಖಾನೆಗಳು ಆರಂಭವಾಗಿ, ಉದ್ಯೋಗಗಳು ಸೃಷ್ಟಿಯಾಗುತ್ತಿವೆ" ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

"ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀವೆಲ್ಲರೂ ಬೆಲೆ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿದ್ದೀರಿ. ನಿಮಗೆ ಸಹಾಯ ಮಾಡಲು ಗ್ಯಾರಂಟಿ ಯೋಜನೆ ತರಲಾಗಿದೆ. ಬಡ ಕುಟುಂಬದ ಮಹಿಳೆಗೆ 2 ಸಾವಿರ, 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಉಚಿತ ಬಸ್ ಪ್ರಯಾಣ, 10 ಕೆ.ಜಿ ಅಕ್ಕಿ, ನಿರುದ್ಯೋಗ ಭತ್ಯೆ ನೀಡಿದ್ದೇವೆ. ಆ ಮೂಲಕ ಬಸವಣ್ಣನವರ ಮಾರ್ಗದರ್ಶನದಂತೆ ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ" ಎಂದು ಹೇಳಿದರು.

"ವಿರೋಧ ಪಕ್ಷದವರು ಅಭಿವೃದ್ಧಿ ಆಗಿಲ್ಲ ಎಂದು ಟೀಕೆ ಮಾಡುತ್ತಿದ್ದಾರೆ. ನಾವು ಈ ಭಾಗದ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ, ಬೀದರ್ ಜಿಲ್ಲೆಯ ಅಭಿವೃದ್ಧಿಗೆ ₹ 2025 ಕೋಟಿ ಮೊತ್ತದ ವಿವಿಧ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಭಾಗದಲ್ಲಿ ಈ ವರ್ಷ ಎರಡನೇ ಬೆಳೆಗೆ ನೀರನ್ನು ಕೊಟ್ಟಿದ್ದೇವೆ.ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವುದು ಈ ಸರ್ಕಾರದ ಸಂಕಲ್ಪ. ಇದನ್ನು ರಾಷ್ಟ್ರೀಯ ಯೋಜನೆ ಮಾಡಬೇಕು ಎಂದು ನಮ್ಮ ಸರ್ಕಾರ ಒತ್ತಡ ಹಾಕುತ್ತಿದೆ" ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

DK Shivakumar
ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

"ಬಿಜೆಪಿ ಸರ್ಕಾರ ತಾನು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ರೂ.5,300 ಕೋಟಿ ಅನುದಾನವನ್ನು ನೀಡಲಿಲ್ಲ. ನೀರಾವರಿ ಯೋಜನೆಗಳಿಗೆ ಸಹಾಯ ಮಾಡಲಿಲ್ಲ. ಆದರೂ ನಮ್ಮ ರಾಜ್ಯದ ಅಭಿವೃದ್ಧಿ ನಿಮ್ಮ ಸರ್ಕಾರದ ಗುರಿ. ನಮ್ಮ ಸರ್ಕಾರ 2 ವರ್ಷ ಪೂರೈಸಿದ ಸಂದರ್ಭದಲ್ಲಿ 1,11,111 ಕುಟುಂಬಗಳ ಜಮೀನಿಗೆ ಪಟ್ಟಾ ಖಾತೆ ನೀಡಿ ಭೂ ಗ್ಯಾರಂಟಿ ಯೋಜನೆ ನೀಡಿದ್ದೇವೆ" ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com