ನಟ ದರ್ಶನ್-ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು.
Darshan and Vijayalakshmi
ದರ್ಶನ್-ವಿಜಯಲಕ್ಷ್ಮಿ
Updated on

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿ ಇತ್ತೀಚೆಗಷ್ಟೇ 22 ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ ಎದುರಾಗಿದೆ.

ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದಕ್ಕೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಅವರ ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು.

Darshan and Vijayalakshmi
'ಡಿ ಬಾಸ್' ಮದುವೆ ವಾರ್ಷಿಕೋತ್ಸವ ಸಂಭ್ರಮ: ಪತ್ನಿಗಾಗಿ ಹಾಡು ಹಾಡಿದ ದರ್ಶನ್! Video

ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿ ಜುಲೈ 4 ರಂದು ನ್ಯಾಯಾಲಯಕ್ಕೆ ಜರಾಗುವಂತೆ ಸೂಚಿಸಿದೆ.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ದರ್ಶನ್ ಫಾರಂ ಹೌಸ್​ನಲ್ಲಿ ಹಲವು ವಿಧದ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಇವುಗಳ ಫೋಟೋ-ವಿಡಿಯೊಗಳು ಈ ಹಿಂದೆ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com