ಹಾಸನ: ವಿರಾಜಪೇಟೆ Congress​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ!

ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಾಸನ: ವಿರಾಜಪೇಟೆ Congress​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ!
Updated on

ಹಾಸನ: ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ: ವಿರಾಜಪೇಟೆ Congress​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ!
ಮೈಸೂರು: ಪ್ರಿಯಕರನ ಜೊತೆ ಮಗಳು ಪರಾರಿ; ಮನನೊಂದು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com