
ಕಾರವಾರ: ಅಬ್ಬರದ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ.
ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಅಬ್ಬರದ ಮಳೆಯಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರು ಕೂಡ ಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.
Advertisement