CET Results 2025: ಇಂದು ಬೆಳಗ್ಗೆ 11.30 ಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು (ಮೇ 24) ಪ್ರಕಟವಾಗಲಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಿಗ್ಗೆ 11:30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಕೆಇಎ ತಿಳಿಸಿದೆ.

ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEAಯ ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.

ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.

ದ್ವಿತೀಯ ಪಿಯು ಪರೀಕ್ಷೆ–1 ಮತ್ತು ಪರೀಕ್ಷೆ–2, ಸಿಬಿಎಸ್‌ಇ, ಐಸಿಎಸ್‌ಇ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ. 15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಕೇರಳದ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳ ಪಿಯು ಫಲಿತಾಂಶವನ್ನು ಕೇರಳ ಪದವಿಪೂರ್ವ ಶಿಕ್ಷಣ ಇಲಾಖೆ ಮೇ 21ರಂದು ಪ್ರಕಟಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com