ಮೈಸೂರು: ₹600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪ ಮುಂದಿನ ವರ್ಷ ಲೋಕಾರ್ಪಣೆ- ಸಿಎಂ ಸಿದ್ದರಾಮಯ್ಯ

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು.
CM Siddaramaiah
ಸಿಎಂ ಸಿದ್ದರಾಮಯ್ಯ ಮತ್ತಿತರರು
Updated on

ಮೈಸೂರು: ಬೀದರ್ ಜಿಲ್ಲೆ ಬಸವನ ಕಲ್ಯಾಣ ತಾಲ್ಲೂಕಿನಲ್ಲಿ ಸುಮಾರು 600 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 'ವಿಶ್ವದ ಮೊದಲ ಸಂಸತ್ತಿನ ಪ್ರತಿಬಿಂಬ' ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ "ಬಸವ ಜಯಂತಿ-2025" "ನಮ್ಮ ನಡೆ ಅನುಭವ ಮಂಟಪದ ಕಡೆ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರಾಗಿದ್ದರು. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಇಡೀ ವಿಶ್ವಕ್ಕೆ ನೀಡಿದರು ಎಂದು ಸ್ಮರಿಸಿದರು.

ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ದದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ಹೇಳಿದರು.

ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ‌ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದುದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು ಎಂದು ತಿಳಿಸಿದರು.

ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ. ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ‌ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

CM Siddaramaiah
ಪಾಪರ್ ಸರ್ಕಾರವಾಗಿದ್ದರೆ 513 ಕೋಟಿ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಬಿಜೆಪಿಯದ್ದು ಸುಳ್ಳಿನ ಕಂತೆ: ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com