
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ನಡೆದಿದೆ.
ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.
ಸಂಡೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿಗಳಾದ ಆಶಾ (28 )ಜಯಲಕ್ಷ್ಮಿ (21), ಒಬ್ಬ ಬಾಲಕ ಮತ್ತು ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಅದಿರು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Advertisement