ಸುಳ್ಳು ಮಾಹಿತಿ ಪ್ರಚಾರ: ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧಾರ

ಬಿಜೆಪಿಯ ಆರೋಪಗಳನ್ನು ಸುಳ್ಳು ಪ್ರಚಾರ ಎಂದು ಕರೆದಿರುವ ರಾಜ್ಯ ಸರ್ಕಾರ, ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ತೀರ್ಮಾನಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ವಿರೋಧ ಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೇ 20ರಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದ ಬಿಜೆಪಿ, 'ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯ ಬಗ್ಗೆ ಆರೋಪ ಪಟ್ಟಿ' ಎಂಬ ಶೀರ್ಷಿಕೆಯ ಅಡಿ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದೆ.

ಬಿಜೆಪಿಯ ಆರೋಪಗಳನ್ನು ಸುಳ್ಳು ಪ್ರಚಾರ ಎಂದು ಕರೆದಿರುವ ರಾಜ್ಯ ಸರ್ಕಾರ, ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ತೀರ್ಮಾನಿಸಿದೆ.

ಸರ್ಕಾರವು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಸರ್ಕಾರಿ ಅಭಿಯೋಜಕರಿಗೆ ಅಗತ್ಯವಿರುವ ಮಾಹಿತಿ ಒದಗಿಸಲು ಉಪ ಕಾರ್ಯದರ್ಶಿ (ಗೃಹ- ಕಾನೂನು ಮತ್ತು ಸುವ್ಯವಸ್ಥೆ) ಕುಮಟಾ ಪ್ರಕಾಶ್ ಅವರನ್ನು ನೇಮಿಸಿದೆ. ಅಲ್ಲದೆ, ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲ ಬಿಎಸ್ ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಿದೆ.

ಪ್ರಾತಿನಿಧಿಕ ಚಿತ್ರ
ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: 'ದಿವಾಳಿ ಮಾಡೆಲ್ ಆಫ್ ಕರ್ನಾಟಕ' ಬಿರುದು ಕೊಟ್ಟ BJP; ವೈಫಲ್ಯಗಳ ಆರೋಪ ಪಟ್ಟಿ ಬಿಡುಗಡೆ

ಕುಮಟಾ ಪ್ರಕಾಶ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕಾರ್ಯದರ್ಶಿಗೆ ದೂರು ಸಲ್ಲಿಸಲು ಅಧಿಕಾರ ನೀಡಿದೆ.

ಸರ್ಕಾರದ ನಡೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಇದಕ್ಕೆ ಭಯಪಡುವುದಿಲ್ಲ. 'ನೀವು (ಸರ್ಕಾರ) ಬಿಜೆಪಿಯನ್ನು ನಿಯಂತ್ರಿಸಬಹುದು ಎಂದು ಭಾವಿಸುತ್ತಿದ್ದರೆ, ಅದು ಸಾಧ್ಯವಾಗುವುದಿಲ್ಲ. ಕರ್ನಾಟಕದಲ್ಲಿ, ತುರ್ತು ಪರಿಸ್ಥಿತಿಯ ಎರಡನೇ ಅಧ್ಯಾಯ ಪ್ರಾರಂಭವಾದಂತೆ ಕಾಣುತ್ತಿದೆ. ಪ್ರಜಾಪ್ರಭುತ್ವಕ್ಕೆ ಅದನ್ನು ಮುರಿಯುವ ಶಕ್ತಿ ಇದೆ. ಜನರಿಗೆ ಆ ಅಧಿಕಾರವಿದೆ, ಆದ್ದರಿಂದ ವಿರೋಧ ಪಕ್ಷ ಮತ್ತು ಮಾಧ್ಯಮಕ್ಕೂ ಅಧಿಕಾರವಿದೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com