Covid-19: ಒಂಬತ್ತು ಹೊಸ ಪ್ರಕರಣ, ರಾಜ್ಯದಲ್ಲಿ ಒಟ್ಟಾರೆ ಸುಮಾರು 100 ಸೋಂಕಿತರು!

ವೈರಸ್‌ನ ಮೇಲೆ ನಿಕಟ ನಿಗಾ ವಹಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಂತೆ ರಾಜ್ಯದಾದ್ಯಂತ ದೈನಂದಿನ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು 150-200 ಕ್ಕೆ ಹೆಚ್ಚಿಸುವುದಾಗಿ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಭಾನುವಾರ ಒಂಬತ್ತು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗುವುದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಸುಮಾರು 100 ಆಗಿದೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವುಗಳು ಸಂಭವಿಸದಿದ್ದರೂ, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 8.65 ರಷ್ಟಿದೆ.

ಪ್ರಸ್ತುತ ರಾಜ್ಯಾದ್ಯಂತ ಒಟ್ಟು 47 ಸಕ್ರಿಯ ಪ್ರಕರಣಗಳಲ್ಲಿ 46 ಮಂದಿ ಮನೆಯಲ್ಲಿ ಪ್ರತ್ಯೇಕವಾಗಿದ್ದರೆ, ಒಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಆರ್‌ಟಿ-ಪಿಸಿಆರ್, rapid antigen tests ಸೇರಿದಂತೆ 104 ಪರೀಕ್ಷೆಗಳನ್ನು ಮಾಡಲಾಗಿದೆ.

ವೈರಸ್‌ನ ಮೇಲೆ ನಿಕಟ ನಿಗಾ ವಹಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳಂತೆ ರಾಜ್ಯದಾದ್ಯಂತ ದೈನಂದಿನ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು 150-200 ಕ್ಕೆ ಹೆಚ್ಚಿಸುವುದಾಗಿ ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಭಾನುವಾರದಿಂದ ತೀವ್ರ ಉಸಿರಾಟದ ಸೋಂಕು (SARI) ಪ್ರಕರಣಗಳ ಪರೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಇದಲ್ಲದೆ, ಇನ್ಫ್ಲುಯೆನ್ಸ ತರಹದ ಅನಾರೋಗ್ಯದ (ILI) ರೋಗಲಕ್ಷಣಗಳನ್ನು ಹೊಂದಿರುವ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರಂತಹ ಹೆಚ್ಚಿನ ಅಪಾಯದ ವ್ಯಕ್ತಿಗಳನ್ನು ಸಹ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಲಾಗುತ್ತದೆ.

ಬೆಂಗಳೂರಿನಲ್ಲಿ ಪ್ರಮುಖ ಸಂಸ್ಥೆಗಳಾದ ನಿಮ್ಹಾನ್ಸ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV) ಸೇರಿದಂತೆ 10 ಕೇಂದ್ರಗಳನ್ನು ಕೋವಿಡ್ ಪರೀಕ್ಷಾ ಕೇಂದ್ರಗಳಾಗಿ ಗೊತ್ತುಪಡಿಸಲಾಗಿದೆ.

ಒಟ್ಟಾರೆ ಪರಿಸ್ಥಿತಿ ಆತಂಕಕಾರಿಯಾಗಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಧಿಕಾರಿಗಳು ಮತ್ತು ತಜ್ಞರು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದು, ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ನಿರ್ಧಾರಗಳನ್ನು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

Casual Images
Covid-19 ಮತ್ತೆ ಒಕ್ಕರಿಸಿತೇ? ವೈದ್ಯರು ಏನೆಂತಾರೆ?

ರಾಜ್ಯ ಸರ್ಕಾರ ಈಗಾಗಲೇ 5,000 ಆರ್‌ಟಿ-ಪಿಸಿಆರ್ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಸೂಚನೆ ನೀಡಿದೆ. ಇದು ಸುಮಾರು ಒಂದು ತಿಂಗಳ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಪ್ರಸ್ತುತ 2,500 ರಾಪಿಡ್ ಅಂಟಿಜೆನ್ ಟೆಸ್ಟ್ ಕಿಟ್ಸ್, 1.3 ಲಕ್ಷ RN ಕಿಟ್ಸ್ ಗಳು ಲಭ್ಯವಿದ್ದು, ಅವುಗಳನ್ನು ಈಗಾಗಲೇ ಜಿಲ್ಲೆಗಳಿಗೆ ರವಾನಿಸಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸ್ಥಿತಿ ಅವಲೋಕಿಸಿದ್ದು, ತಜ್ಞರ ಸಲಹೆ ಮೇರೆಗೆ ಕ್ಷಿಪ್ರವಾಗಿ ಕಾರ್ಯನಿರ್ವಹಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com