ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ: ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ

ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಹಲವು ಸೂಚನೆಗಳನ್ನು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ
Updated on

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಹಲವು ಸೂಚನೆಗಳನ್ನು ನೀಡಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಈ ಬಾರಿ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ ನೀಡಿದರು. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ
Covid-19: ರಾಜ್ಯದಲ್ಲಿ ಇಂದು 9 ಮಂದಿಗೆ ಪಾಸಿಟಿವ್, ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆ

ಸಿಎಂ ನೀಡಿದ ಇತರೆ ಸೂಚನೆಗಳು

  • ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

  • ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.

  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

  • ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

  • ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

  • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಮುಖ್ಯಮಂತ್ರಿಗಳ ಸೂಚನೆ

  • ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

  • ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

  • ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

  • ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭಿಸಬೇಕು.

  • ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

  • ಕೊರೋನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

  • ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com