
ಮೈಸೂರು: ಮೈಸೂರು ಸ್ಯಾಂಡಲ್ ಕನ್ನಡಿಗರೇ ಕಟ್ಟಿ ಬೆಳೆಸಿದ ಸಂಸ್ಥೆಯಾಗಿದ್ದು, ಅದಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಕನ್ನಡಿಗರನ್ನು ರಾಯಭಾರಿಯಾಗಿ ಮಾಡ ಬೇಕು. ತೆಲುಗು ನಟಿ ತಮನ್ನಾ ಬಾಟಿಯಾ ನೇಮಕಕ್ಕೆ ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್, ಮೈಸೂರು ಸ್ಯಾಂಡಲ್ ಸೋಪ್ ರಾಯಭಾರತ್ವಕ್ಕೆ ನಟಿ ತಮನ್ನಾ ಭಾಟಿಯಾ ನೇಮಕ, ಒಂದು ಅರ್ಥದಲ್ಲಿ ಕನ್ನಡಿಗರಿಗೆ ಮಾಡಿದ ಅವಮಾನ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಕನ್ನಡಿಗರು ಬಹಳಷ್ಟು ಜನ ಇದ್ದಾರೆ. ಅವರ್ಯಾರು ಸರ್ಕಾರದ ಕಣ್ಣಿಗೆ ಕಾಣಿಸಲಿಲ್ವ.
ಅವರದ್ದೇ ಪಕ್ಷದ ನಟಿ ರಮ್ಯಾ ಅವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕನ್ನಡಿಗರನ್ನೇ ರಾಯಭಾರಿ ಮಾಡಿದ್ದರೇ ಬ್ರಾಂಡಿನ ಮೌಲ್ಯ ಇನ್ನೂ ಹೆಚ್ಚಾಗುತ್ತಿತ್ತು ಎಂದು ಹೇಳಿದ್ದಾರೆ.
ಯದುವೀರ್ ಅವರನ್ನೇ ರಾಯಭಾರಿ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನಗೆ ವೈಯುಕ್ತಿಕವಾಗಿ ರಾಯಭಾರಿಯಾಗುವ ಆಸೆ ಯಿಲ್ಲ. ರಾಜಮನೆತನ ಕಮರ್ಷಿಯಲ್ ಆಗಿ ಸೇವೆ ಮಾಡುವುದಿಲ್ಲ. ನಾವು ಸದಾಕಾಲ ಕನ್ನಡದ ಬ್ರಾಂಡ್‌ಗಳ ಪರವಾಗಿಯೇ ಇರುತ್ತೇವೆ ಎಂದು ಹೇಳಿದರು.
Advertisement