ಮೈಸೂರು ರಾಜವಂಶಸ್ಥರಿಗೆ ಟಿಡಿಆರ್: ಸುಪ್ರೀಂ ಕೋರ್ಟ್ ನಿಂದ ನಾಳೆ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ

ಮೇ 22 ರಂದು, ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಮತ್ತೊಂದು ಪೀಠ, ಮೈಸೂರು ರಾಜವಂಶಸ್ಥರಿಗೆ 3,011 ಕೋಟಿ ರೂ. ಮೌಲ್ಯದ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
Supreme court
ಸುಪ್ರೀಂ ಕೋರ್ಟ್ online desk
Updated on

ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ 15 ಎಕರೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮೈಸೂರು ರಾಜವಂಶಸ್ಥರಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳ(ಟಿಡಿಆರ್) ಅಡಿಯಲ್ಲಿ 3,011 ಕೋಟಿ ರೂ. ನೀಡುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಮತ್ತೊಂದು ಪೀಠ ನೀಡಿದ ಆದೇಶವನ್ನು ಹೇಗೆ ಪರಿಶೀಲಿಸಬಹುದು ಎಂದು ಪ್ರಶ್ನಿಸಿತ್ತು.

ಮೇ 22 ರಂದು, ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಮತ್ತೊಂದು ಪೀಠ, ಮೈಸೂರು ರಾಜವಂಶಸ್ಥರಿಗೆ 3,011 ಕೋಟಿ ರೂ. ಮೌಲ್ಯದ ಟಿಡಿಆರ್ ಪ್ರಮಾಣಪತ್ರಗಳನ್ನು ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಆದಾಗ್ಯೂ, ಹಿರಿಯ ವಕೀಲರು, ಕರ್ನಾಟಕ ಪಟ್ಟಣ ಮತ್ತು ದೇಶ ಯೋಜನಾ ಕಾಯ್ದೆಗೆ 2004 ರ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಟಿಡಿಆರ್ ನಿಬಂಧನೆಯಲ್ಲಿ, 1996 ರಲ್ಲಿ ಬೆಂಗಳೂರು ಅರಮನೆ(ಸ್ವಾಧೀನ ಮತ್ತು ವರ್ಗಾವಣೆ)ಕಾಯ್ದೆಯಡಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪೂರ್ವಾನ್ವಯವಾಗಿ ಅನ್ವಯಿಸಲಾಗುವುದಿಲ್ಲ ಎಂದು ಹೇಳಿದರು.

Supreme court
ಅರಮನೆ ಮೈದಾನ ಮಾಲೀಕತ್ವದ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ತೆಗೆದುಕೊಳ್ಳುವವರೆಗೆ TDR ನೀಡಲ್ಲ: ರಾಜ್ಯ ಸರ್ಕಾರ

ಟಿಡಿಆರ್ ನಿಬಂಧನೆ ಜಾರಿಗೆ ಮೊದಲೇ 15 ಎಕರೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಮತ್ತು ಅದಕ್ಕೆ ಪರಿಹಾರವನ್ನು ಈಗಾಗಲೇ ಮೂಲ ಕಾಯ್ದೆಯಡಿಯಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸ್ವಾಧೀನವು 1996 ರ ಕಾನೂನಿನ ಅಡಿಯಲ್ಲಿ ನಡೆದಿದ್ದು, 11 ಕೋಟಿ ರೂ. ಪರಿಹಾರವನ್ನು ನಿಗದಿಪಡಿಸಲಾಗಿದೆ. ಆ ಸಮಯದಲ್ಲಿ ಟಿಡಿಆರ್ ಪರಿಕಲ್ಪನೆ ಅಸ್ತಿತ್ವದಲ್ಲಿರಲಿಲ್ಲ ರಾಜ್ಯ ಸರ್ಕಾರದ ಪರ ವಕೀಲರು ಹೇಳಿದ್ದಾರೆ.

ಬೆಂಗಳೂರು ಅರಮನೆಗೆ ಸೇರಿದ 15 ಎಕರೆ ಪ್ರದೇಶವನ್ನು ಬಳ್ಳಾರಿ ಹಾಗೂ ಜಯಮಹಲ್ ರಸ್ತೆಗಳ ಅಭಿವೃದ್ಧಿಗಾಗಿ 1994ರಲ್ಲಿ ಕರ್ನಾಟಕ ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು. ಆಗ, ಸ್ವಾಧೀನಪಡಿಸಿಕೊಂಡಿರುವ ಭೂಮಿಯ ಬೆಲೆಯನ್ನು 11 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಅದರ ವಿರುದ್ಧ ಅಸಮಾಗೊಂಡಿರುವ ಮೈಸೂರಿನ ಮಹಾರಾಜರ ಮನೆತನ ಅದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com