ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ: IMD Weather Report

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
water level in the Cauvery river has started to rise
ಕಾವೇರಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿರುವ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇಂದಿನವರೆಗೆ ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗುರುವಾರದಿಂದ ಹವಾಮಾನ ಪರಿಸ್ಥಿತಿಗಳು ಸರಾಗವಾಗಲಿದ್ದು, ರಾಜ್ಯದಲ್ಲಿ ಎಲ್ಲಿಯೂ ಯಾವುದೇ ರೆಡ್ ಅಲರ್ಟ್‌ಗಳನ್ನು ನೀಡಲಾಗಿಲ್ಲ, ಆದರೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳಭಾಗಗಳಿಗೆ ಮಾತ್ರ ಆರೆಂಜ್ ಮತ್ತು ಯೆಲ್ಲೂ ಅಲರ್ಟ್‌ಗಳನ್ನು ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರದಂದು ಅತಿ ಹೆಚ್ಚು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬುಧವಾರದಿಂದ ತೀವ್ರತೆ ಕಡಿಮೆಯಾಗಲಿದೆ ಎಂದು IMD ತಿಳಿಸಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮೇ 28ರವರೆಗೆ ಭಾರೀ ಮಳೆ: ಸೋಮವಾರ ಮತ್ತು ಮಂಗಳವಾರ ಬೆಳಗಾವಿ ಮತ್ತು ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಗದಗದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಾದ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಬುಧವಾರದವರೆಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಬುಧವಾರದವರೆಗೆ ಗಾಳಿಯ ವೇಗ ಗಂಟೆಗೆ 60 ಕಿ.ಮೀ. ಇರಲಿದೆ. ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಯಲ್ಲೂ ಭಾರಿ ಮಳೆಯಾಗಲಿದ್ದು, ಸೋಮವಾರ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

water level in the Cauvery river has started to rise
ಶಿರಾಡಿ ಘಾಟ್ ನ ಎರಡು ಕಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ

ಬೆಂಗಳೂರು, ಮಂಡ್ಯ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬುಧವಾರ ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಬೆಂಗಳೂರು, ತುಮಕೂರು ಮತ್ತು ರಾಮನಗರದಲ್ಲಿ ವಾರವಿಡೀ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com