ಕಲಬುರಗಿ ಜಿಲ್ಲಾಧಿಕಾರಿಗೆ ನಿಂದನೆ: ಬಿಜೆಪಿ MLC ರವಿಕುಮಾರ್ ವಿರುದ್ಧ FIR

ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ದತ್ತಾತ್ರೇಯ ದೂರಿನಲ್ಲಿ ತಿಳಿಸಿದ್ದಾರೆ.
Ravi kumar
ರವಿಕುಮಾರ್
Updated on

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ದತ್ತಾತ್ರೇಯ ಇಕ್ಕಳಕಿ ಅವರು ನೀಡಿದ ದೂರಿನ ಅನ್ವಯ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ–ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಈಚೆಗೆ ಬಿಜೆಪಿಯ ಪ್ರತಿಭಟನೆ ನಡೆಯಿತು. ರವಿಕುಮಾರ್ ಅವರು ತಮ್ಮ ಭಾಷಣದಲ್ಲಿ ‘ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಪಾಕಿಸ್ತಾನದವರೋ ಅಥವಾ ಭಾರತದವರೋ ಎಂಬುದು ಖಚಿತವಾಗಿಲ್ಲ. ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐಗಳಾದ ಚಂದ್ರಶೇಖರ ತಿಗಡಿ ಮತ್ತು ನಟರಾಜ ಲಾಡೆ ಅವರು ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಕಲಬುರಗಿ ಕರ್ನಾಟಕದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ದತ್ತಾತ್ರೇಯ ದೂರಿನಲ್ಲಿ ತಿಳಿಸಿದ್ದಾರೆ.

Ravi kumar
ಹಲ್ಲೆ ಯತ್ನ: ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು

ರವಿಕುಮಾರ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹುಟ್ಟು ಹಾಕಿ, ಪೊಲೀಸ್ ಅಧಿಕಾರಿಗಳನ್ನು ಗುಲಾಮರು ಎಂದು ಅವಹೇಳನಕಾರಿ ಪದ ಬಳಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕು ಎಂದಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳ ವಿರುದ್ಧವೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲಾಧಿಕಾರಿ ವಿರುದ್ಧದ ಅಜಾಗರೂಕ ಹೇಳಿಕೆಗಳಿಗೆ ರವಿಕುಮಾರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆನಾನು ಅಧಿಕಾರಿಗಳನ್ನು ಗೌರವಿಸುತ್ತಾರೆ ಮತ್ತು ಅವರ ವೃತ್ತಿಪರ ಸಮಗ್ರತೆಯ ಬಗ್ಗೆ ಯಾವುದೇ ದೂರುಗಳಿಲ್ಲ ಎಂದು ರವಿ ಕುಮಾರ್ ಸ್ಪಷ್ಟನೆ ನೀಡಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com