ಮೆಟ್ರೋ ಕಾಮಗಾರಿ ಇರುವೆಡೆ ಸುಗಮ ಸಂಚಾರಕ್ಕೆ ಮುಖ್ಯರಸ್ತೆ ಮತ್ತು ಸರ್ವೀಸ್ ರಸ್ತೆ ವಿಲೀನ: ಡಿಸಿಎಂ

ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.
DK Shivakumar on Monday conducted inspection of the main road and service road
ಕಾಮಗಾರಿ ಪರಿಶೀಲಿಸುತ್ತಿರುವ ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ ಬಳಿ ವೀಕ್ಷಣೆ ಮಾಡಿದರು. ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು.

ಈ ವಿಚಾರವಾಗಿ ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.

ಮೆಟ್ರೋ ರೈಲು ಯೋಜನೆ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

DK Shivakumar on Monday conducted inspection of the main road and service road
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ, ಪ್ರಯಾಣಿಕರ ಪ್ರತಿಭಟನೆ!

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com